ಬೆಂಗಳೂರು : ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷವಾಗಿರುವ ನೆನಪಿನಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ʼಸಂವಿಧಾನ ಜಾಥʼ ರಾಜ್ಯದಾದ್ಯಂತ ಒಂದು ತಿಂಗಳ ಕಾಲ ಸಂಚರಿಸಿದ್ದು, ಇದಕ್ಕೆ ಪೂರಕವಾಗಿ ಬೆಂಗಳೂರಿನಲ್ಲಿ ಫೆ. 24-25ರಂದು ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಏಕತಾ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸಲು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
![](https://kannadanadunews.in/wp-content/uploads/2024/02/WhatsApp-Image-2024-02-19-at-17.59.42_6d875d77-1024x646.jpg)
ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಸಮಾವೇಶಕ್ಕೆ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಲಿದ್ದು ಕೈಗೊಳ್ಳಬೇಕಾದ ಕ್ರಮಗಳನ್ನು ಕುರಿತಂತೆ ಪರಿಶೀಲನೆ ನಡೆಸಿದರಲ್ಲದೆ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿ ಸಮಾವೇಶವನ್ನು ಯಶಸ್ವಿಗೊಳಿಸಲು ಸೂಚನೆಗಳನ್ನು ನೀಡಿದರು
Facebook
Twitter
LinkedIn
Telegram
WhatsApp
Email
Print