ದಾಸ್ತಾನು ಗೋದಾಮಿಗೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ

ಹಾಸನ.ಫೆ.07.ಜಿಲ್ಲೆಯ ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಅಕ್ಕಿ, ಅಡುಗೆ ಎಣ್ಣೆ ಪ್ಯಾಕಿಂಗ್ ಮಾಡುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ದಾಸ್ತಾನು ಗೋದಾಮಿಗೆ ಇಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ತಿಂಗಳು ಬರುವ ದಾಸ್ತಾನು ಮತ್ತು ವಿತರಣೆ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಪ್ಯಾಕಿಂಗ್ ಮತ್ತು ವಿತರಣೆಯಲ್ಲಿ ಎಲ್ಲಿಯೂ ಲೋಪವಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಅಕ್ಕಿ, ಬೇಳೆಯ ಚೀಲಗಳನ್ನು ಬಿಚ್ಚಿಸಿ ಧಾನ್ಯಗಳ ಗುಣಮಟ್ಟ ಪರಿಶೀಲಿಸಿದ ಸಚಿವರು,ವಿತರಣೆಯಲ್ಲಿ ಯಾರಿಂದಲೂ ದೂರು ಬಾರದಂತೆ ನಿಗಾವಹಿಸಬೇಕೆಂದು ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ, ಹಾಸನ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾಂತರಾಜ್ ಹಾಗೂ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top