ಬೇರೆ ಬೇರೆ ರಾಜ್ಯದಿಂದ ಬಂದವರಿಗೆ ಕಡ್ಡಾಯವಾಗಿ ಕನ್ನಡ ಕಲಿಸುತ್ತೇವೆ ಈ.ರಮೇಶ್

ಮರಿಯಮ್ಮನಹಳ್ಳಿ : ನಾವು ಕೇವಲ ನವೆಂಬರ್ ಕನ್ನಡಿಗರಾಗದೇ, ‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯವೂ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾ.ಗೌ.) ಬಣ ಹೋಬಳಿ ಅಧ್ಯಕ್ಷ ಈ.ರಮೇಶ್ ಬ್ಯಾಲಕುಂದಿ ಹೇಳಿದರು. ಅವರು ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವವನ್ನು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಮತ್ತು ಪುನೀತ್ರಾ ಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ನಟ ಪುನೀತ್ ರಾಜ್‍ಕುಮಾರ್ ನಿಧನದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಈ ಬಾರಿ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. 

ಬೇರೆ ಬೇರೆ ರಾಜ್ಯಗಳಿಂದ ಬಂದು ನಮ್ಮ ರಾಜ್ಯದಲ್ಲಿ ನೆಲೆಸಿರುವವರಿಗೆ ನಮ್ಮ ಪ್ರೀತಿಯ ಕನ್ನಡ ಭಾಷೆಯನ್ನು ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಬದ್ಧರಾಗಿರುತ್ತೇವೆ. ನಮ್ಮ ಕನ್ನಡ ನಾಡು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುತ್ತದೆ. ನಮ್ಮ ನಾಡಿನಲ್ಲಿ ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳ ನದಿಗಳು ಹರಿಯುವ ಸಾಧು-ಸಂತರು-ದಾಸರು- ಶಿವಶರಣರು – ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ. ಇಂತಹ ನಾಡಿನಲ್ಲಿ ಹುಟ್ಟಿರುವುದು ನಮ್ಮೆಲ್ಲರ ಅದೃಷ್ಟ. ನವೆಂಬರ್ ಒಂದರಂದು ನಾವೆಲ್ಲರೂ ಅತ್ಯಂತ ಸಡಗರ-ಸಂಭ್ರಮದಿಂದ ಎಲ್ಲ ಜಾತಿ ಮತ ಧರ್ಮಗಳ ಜನರು ಸೇರಿ ಒಗ್ಗೂಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ.

ಮತ್ತು ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳನ್ನು ರಾಜ್ಯದಾದ್ಯಂತ ವಿವಿಧ ಆಯಕಟ್ಟಿನ ಸ್ಥಳಗಳಲ್ಲಿ ಹಾರಿಸಲಾಗುತ್ತದೆ. ಮತ್ತು ಕನ್ನಡ ಗೀತೆಯನ್ನು ‘ಜಯ ಭಾರತ ಜನನೀಯ ತನುಜಾತೆ. ಜಯಹೇ ಕರ್ನಾಟಕ ಮಾತೆ’ ಹಾಡುವುದರಿಂದ ಇಡೀ ರಾಜ್ಯವು ಈ ದಿನದಂದು ಕನ್ನಡದ ಹಬ್ಬವನ್ನು ಆಚರಿಸುತ್ತದೆ.  ಈ ಸಂಧರ್ಭದಲ್ಲಿ ಬಿ.ಪಾರ್ವತಮ್ಮ, ಬಿ.ದೇವಮ್ಮ, ಜಿ.ಶ್ರೀನಿವಾಸ, ಜಿ.ಎರ್ರಿಸ್ವಾಮಿ ಗೌಡ, ಗಾಳೇಶ್, ಶಫಿವುಲ್ಲಾ, ರವಿ ಆಟೋ, ಸುಭಾಷ್, ಅರುಣ್, ರಾಘವೇಂದ್ರ ಶೆಟ್ಟಿ, ಶ್ರೀಕಾಂತ್, ವೆಂಕಟೇಶ, ಈ.ಸ್ವಾಮಿ, ಗಂಗಾಧರಯ್ಯ ಸ್ವಾಮಿ ಇತರರಿದ್ದರು.

Leave a Comment

Your email address will not be published. Required fields are marked *

Translate »
Scroll to Top