ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಶಾಕ್ | ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಬೆಂಗಳೂರು: ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅರ್ಜಿ ವಜಾ ಮಾಡುವಂತೆ ಸಿಎಂ ಸಿಒದ್ದರಾಮಯ್ಯ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಮಾಡುವಂತೆ ಗ್ರೀನ್ ಸಿಗ್ನಲ್ ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 14 ಸೈಟುಗಳನ್ನು ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಖಾಸಗಿ ವ್ಯಕ್ತಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ಥಾವರ ಚಂದ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡುತ್ತಾರೆ. ಆದರೆ, ಪ್ರಾಸಿಕ್ಯೂಷನ್ ಎದುರಿಸದೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‍ಗೆ ಮೇಲ್ಮನವಿ ಹೋಗಿದ್ದರು.

ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ತನ್ನ ಆದೇಶದಲ್ಲಿ, ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದು ತಿಳಿಸಿ, ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್‍ಗೆ ಹಾಜರಾಗುವಂತೆ ರಾಜ್ಯಪಾಲರು ನೋಟೀಸ್ ನೀಡದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮುಡಾ ಹಗರಣದ ಅರ್ಜಿ ವಿಚಾರಣೆಯನ್ನೂ ಕೈಗೆತ್ತಿಕೊಂಡಿತ್ತು. ಆದರೆ, ಹೈಕೋರ್ಟ್‍ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯ ಆದೇಶ ಹೊರಬೀಳುವವರೆಗೂ ಕೆಳ ಹಂತದ ಯಾವುದೇ ನ್ಯಾಯಾಲಯಗಳು (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಯಾವುದೇ ತೀರ್ಪು ಅಥವಾ ಆದೇಶ ನೀಡದಂತೆ ಹೈಕೋರ್ಟ್‍ನಿಂದ ತಡೆ ಒಡ್ಡಲಾಗಿತ್ತು. ಇದೀಗ ಆದೇಶ ಹೊರ ಬಿದ್ದ ಬೆನ್ನಲ್ಲಿಯೇ ಕೆಳ ಹಂತದ ಕೋರ್ಟ್‍ಗಳಲ್ಲಿ ಪ್ರಾಸಿಕ್ಯೂಷನ್ ವಿಚಾರಣೆ ನಡೆಯಲಿದೆ. ಇದೀಗ ಸಿಎಂ ಹೈಕೋರ್ಟ್‍ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಳಿಸಿದ ಬೆನ್ನಲ್ಲಿಯೇ ಮುಡಾ ಹಗರಣದ ತನಿಖೆ ಮುಮದುವರೆಯಲಿದೆ.

ಸುಪ್ರೀಂ ಕೋರ್ಟ್‍ಗೆ ಮೊರೆ ಹೋಗಲು ನಿರ್ಧಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್‍ನಲ್ಲಿ ವಜಾಗೊಳಿಸಿದ ಬೆನ್ನಲ್ಲಿಯೇ ಇದೀಗ ಅವರ ಕುರ್ಚಿಗೆ ಕಂಟಕ ಎದುರಾಗಲಿದೆ ಎಂಬ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ಹಾಗೂ ವಕೀಲರೊಂದಿಗೆ ಚರ್ಚೆ ಮಾಡಿದ್ದಾರೆ. ಇದೀಗ ಸುಪ್ರೀಂ ಕೋರ್ಟ್‍ಗೆ ಮೊರೆ ಹೋಗಲು ಸಿಎಂ ನಿರ್ಧಾರ ಮಾಡಿದ್ದಾರೆ. ತೀರ್ಪಿನ ವಿವರ ಬಂದ ಬಳಿಕ ಕಾನೂನು ಹೋರಾಟದ ಬಗ್ಗೆ ತಿರ್ಮಾನ ಮಾಡಿದ್ದಾರೆ. ಇದೀಗ ಹಿರಿಯ ವಕೀಲರ ಜೊತೆಗೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಹೈಕೋರ್ಟ್ ಹೇಳಿದ್ದೇನು?
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.

ನಡೆದಿತ್ತು ಸುದೀರ್ಘ ವಾದ – ಪ್ರತಿವಾದ
ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

ಸಿದ್ದರಾಮಯ್ಯ ಪರ ವಕೀಲರ ವಾದ ಏನಿತ್ತು?
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರವೇನಿತ್ತೆಂಬುದನ್ನು ರಾಜ್ಯಪಾಲರು ತಿಳಿಸಿಲ್ಲ ಎಂದು ಸಿಎಂ ಪರ ವಕೀಲರು ವಾದ ಮಂಡನೆ ಮಾಡಿದ್ದರು. ಯಾವುದಾದರೂ ಕಡತಕ್ಕೆ ಸಿಎಂ ಸಹಿ ಹಾಕಿದ್ದಾರೆಯೇ ಎಂದು ಹೇಳಿಲ್ಲ. ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ವಿಶೇಷ ಸಂದರ್ಭದಲ್ಲμÉ್ಟೀ ಬಳಸಬೇಕು. ಹಾಗೆ ಬಳಸಿದಾಗ ಅದಕ್ಕೆ ಕಾರಣಗಳನ್ನು ನೀಡಬೇಕು. ಆದರೆ ಪ್ರಕ್ರಿಯೆ ಪಾಲಿಸದೇ ತರಾತುರಿಯಲ್ಲಿ ಆದೇಶ ನೀಡಿದ್ದಾರೆ. ಭ್ರμÁ್ಟಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿಯಲ್ಲಿ ಪೆÇಲೀಸ್ ಅಧಿಕಾರಿಗಳಿಗೆ ಅನುಮತಿ ನೀಡಬಹುದೇ ಹೊರತು, ಖಾಸಗಿ ವ್ಯಕ್ತಿಗಳಿಗೆ ನೀಡುವಂತಿಲ್ಲ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ಒಪ್ಪಬೇಕಿತ್ತು. ಏಕೆ ಒಪ್ಪಿಲ್ಲವೆಂಬುದಕ್ಕೆ ರಾಜ್ಯಪಾಲರು ಸೂಕ್ತ ಕಾರಣ ನೀಡಿಲ್ಲ. ಬಿಜೆಪಿ, ಜೆಡಿಎಸ್ ನಾಯಕ ವಿರುದ್ಧದ ದೂರಿಗೆ ಅನುಮತಿ ನೀಡದೇ ಸಿದ್ದರಾಮಯ್ಯ ವಿರುದ್ಧ ಮಾತ್ರ ಅನುಮತಿ ನೀಡಿ ತಾರತಮ್ಯ ನೀತಿ ಅನುಸರಿಸಿದ್ದಾರೆ. ದೂರುದಾರರ ಹಿನ್ನೆಲೆ ಪರಿಗಣಿಸದೇ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಕಾನೂನುಬಾಹಿರ. ವಿಪಕ್ಷಗಳ ಸರ್ಕಾರಗಳನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲಾಗುತ್ತಿದೆ. ಹೀಗೆಂದು ಸಿಎಂ ಪರ ವಕೀಲರಾದ ಅಬಿμÉೀಕ್ ಮನು ಸಿಂಘ್ವಿ ವಾದ ಮಂಡನೆ ಮಾಡಿದ್ದರು.

ಸಿಎಂ ಪರ ವಕೀಲರ ವಾದಕ್ಕೆ ಸಾಲಿಸಿಟರ್ ಜನರಲ್ ತುμÁರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು. ರಾಜ್ಯಪಾಲರು ಮೇಲ್ನೋಟಕ್ಕೆ ಅಪರಾಧದ ಅಂಶಗಳಿವೆಯೇ ಎಂಬುದನ್ನμÉ್ಟೀ ಸೆಕ್ಷನ್ 17 ಎ ಅಡಿಯಲ್ಲಿ ನೋಡಬೇಕು. ರಾಜ್ಯಪಾಲರು ತೀರ್ಪು ನೀಡಿಲ್ಲ ಮತ್ತು ನೀಡುತ್ತಿಲ್ಲ. ತನಿಖೆಗೆ ಅನುಮತಿಯμÉ್ಟೀ ನೀಡುತ್ತಿದ್ದಾರೆ. ಹೀಗಾಗಿ ಅವರು ವಿವರವಾದ ಕಾರಣಗಳನ್ನು ಕೊಡಬೇಕಿಲ್ಲ. ಕೊಟ್ಟರೆ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದಂತೆ ಆಗುವ ಸಾಧ್ಯತೆ ಇರುತ್ತದೆ ಎಂದು ತುμÁರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top