ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಚುನಾವಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಜಾಗಕ್ಕೆ ಅಧ್ಯಕ್ಷರಾಗಿ ಎಂ.ಎಸ್. ರಕ್ಷಾ ರಾಮಯ್ಯ ಆಯ್ಕೆ

ಬೆಂಗಳೂರು/ಧಾರವಾಡ: ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 

 

          ಈ ವರೆಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಗೆ ಧಾರವಾಡದಲ್ಲಿಂದು ನಡೆದ ಚುನಾವಣೆಯಲ್ಲಿ ರಕ್ಷಾ ರಾಮಯ್ಯ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಅಧಿಕಾರದ ಅವಧಿ 6 ವರ್ಷಗಳ ವರೆಗೆ ಇರುತ್ತದೆ. ಪ್ರಹ್ಲಾದ್ ಜೋಶಿ ಅವರಿಗೂ ಮುನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

 

          ಈ ಕುರಿತು ಸಂತಸ ವ್ಯಕ್ತಪಡಿಸಿರುವ ರಕ್ಷಾ ರಾಮಯ್ಯ, ಕ್ರೀಡೆ ಯುವ ಸಮೂಹದ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದ್ದು, ಮಾನಸಿಕ ಮತ್ತು ದೈಹಿಕ ವಿಕಾಸಕ್ಕೆ ಪೂರಕವಾಗಿದೆ. ಟೇಬಲ್ ಟೆನ್ನಿಸ್ ಅತ್ಯಂತ ಪ್ರಮುಖ ಕ್ರೀಡೆಯಾಗಿದ್ದು, ಇದರಿಂದ ದೇಹದ ಎಲ್ಲಾ ಅಂಗಾಂಗಳಿಗೂ ವ್ಯಾಯಾಮ ದೊರೆಯುತ್ತದೆ. ಏಕಾಗ್ರತೆಯ ಪ್ರತೀಕವಾಗಿರುವ ಟೇಬಲ್ ಟೆನ್ನಿಸ್ ಕ್ರೀಡೆಯನ್ನು ರಾಜ್ಯದಲ್ಲಿ ಮತ್ತಷ್ಟು ಪ್ರಗತಿ ಪಥದತ್ತ ಕೊಂಡೊಯ್ಯಲು ಮತ್ತು ಪ್ರೋತ್ಸಾಹಿಸಲು ಶ್ರಮಿಸುವುದಾಗಿ ಹೇಳಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top