ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐದು ಜನ ಅಭ್ಯರ್ಥಿಗಳ ಹೆಸರುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ನೀಡಿರುವ ಅಧಿಕೃತ ಪ್ರಕಟಣೆಯಲ್ಲಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್ ಮತ್ತು ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ ಬಿ ಪಾಟೀಲ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ. 

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top