ಕರ್ನಾಟಕದ ಹವಾಮಾನ ಮುನ್ಸೂಚನೆ

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ನಿನ್ನೆ ಸುಳ್ಯ ತಾಲೂಕು ಹಲವು ಭಾಗಗಳಲ್ಲಿ ಮತ್ತು ಕಡಬ ತಾಲೂಕಿನ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗಿತ್ತು. ಇವತ್ತು ಆ ರೀತಿಯ ಮಳೆಯ ಸಾಧ್ಯತೆ ಕಡಿಮೆ ಇರಬಹುದು)

 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೂಡಿಗೆರೆ, ಕುದುರೆಮುಖ, ಬಾಳೆಹೊನ್ನೂರು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

ಮೈಸೂರು, ಚಾಮರಾಜನಗರದ ಕೊಳ್ಳೇಗಾಲ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಗದಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

 

ಈಗಿನಂತೆ ಆಗಸ್ಟ್ 15ರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಜಾಸ್ತಿ ಇರಬಹುದು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top