ನಾಡಗೀತೆಗೆ ಆಕ್ಷೇಪ ಪ್ರಕರಣ;  ತೀರ್ಪು ಕಾಯ್ದಿರಿಸಿದ ‍ ಹೈಕೋರ್ಟ್

ಬೆಂಗಳೂರು: ವಿಧಾನಸಭೆಯಲ್ಲಿ ವಿಸ್ತೃತ ರ‍್ಚೆಯ ಬಳಿಕ ಶಿಕ್ಷಣ ಕಾಯಿದೆ ಅಡಿ ನೋಂದಾಯಿತ ಶಾಲೆಗಳೆಲ್ಲವೂ ಖ್ಯಾತ ಗಾಯಕ, ಸಂಗೀತ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ೨ ನಿಮಿಷ ೩೦ ಸೆಕೆಂಡ್‌ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದು ರಾಜ್ಯ ರ‍್ಕಾರವು ಹೈಕರ‍್ಟ್‌ಗೆ ತಿಳಿಸಿದೆ. ಇದನ್ನು ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

ರಾಜ್ಯ ಸರ್ಕಾರ ೨೦೨೩ರ ಸೆಪ್ಟೆಂಬರ್‌ ೨೫ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮರ‍್ತಿ ಸಲ್ಲಿಸಿರುವ ರ‍್ಜಿ ಸಂಬಂಧ ರ‍್ಜಿದಾರರ ಮತ್ತು ರ‍್ಕಾರದ ಪರ ವಕೀಲರ ವಾದ -ಪ್ರತಿವಾದ ಆಲಿಸಿ ವಿಚಾರಣೆ ಪರ‍್ಣಗೊಳಿಸಿರುವ ನ್ಯಾಯಮರ‍್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕಸದಸ್ಯ ಪೀಠ ತರ‍್ಪು ಕಾಯ್ದಿರಿಸಿತು.

ರ‍್ಕಾರದ ಪರ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಎಸ್‌.ಎ. ಅಹ್ಮದ್ ಅವರು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನರ‍್ದಿಷ್ಟ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ನಿಗದಿಪಡಿಸಲು ಸಂವಿಧಾನದ ಪರಿಚ್ಛೇದ ೧೬೨ ಅಡಿಯಲ್ಲಿ ರಾಜ್ಯ ರ‍್ಕಾರಕ್ಕೆ ಅಧಿಕಾರ ಹಾಗೂ ಹಕ್ಕು ಇದೆ. ಅದೇ ರೀತಿ ರ‍್ನಾಟಕ ಶಿಕ್ಷಣ ಕಾಯಿದೆಯ ಸೆಕ್ಷನ್‌ ೧೩೩ರ ಅಡಿಯಲ್ಲಿ ಇಂತಹದೊಂದು ಆದೇಶ ಮಾಡಲು ರ‍್ಕಾರ ಅಧಿಕಾರ ಹೊಂದಿದೆ. ಅದರಂತೆ ನಾಡಗೀತೆ ವಿಚಾರದಲ್ಲಿ ರ‍್ಕಾರ ಹೊರಡಿಸಿರುವ ಆದೇಶ ಕಾನೂನುಬದ್ಧವಾಗಿದ್ದು, ರ‍್ಜಿ ವಜಾಗೊಳಿಸಬೇಕು ಎಂದು ಕೋರಿದರು.

ರ‍್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರು, ನಾಡಗೀತೆ ವಿಚಾರದಲ್ಲಿ ರ‍್ಕಾರ ಕರ‍್ಯಕಾರಿ ಆದೇಶ ಹೊರಡಿಸಿದೆ. ಇದು ಸಂವಿಧಾನದ ೧೯ನೇ ವಿಧಿ ಅಡಿಯಲ್ಲಿ ಜನರಿಗೆ ದೊರೆತಿರುವ ಮೂಲಭೂತ ಹಕ್ಕುಗಳಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ‍್ಯದ ಉಲ್ಲಂಘನೆಯಾಗಿದೆ. ವಾಕ್‌ ಮತ್ತು ಅಭಿವ್ಯಕ್ತಿ ರಾಜ್ಯ ಅಥವಾ ರಾಷ್ಟ್ರಗೀತೆಯನ್ನು ತನ್ನ ಇಚ್ಛೆಯ ರಾಗ/ಧಾಟಿಯಲ್ಲಿ ಹಾಡುವ ಹಕ್ಕು ಸೇರಿದೆ. ಅದನ್ನು ರ‍್ಕಾರ ಮೊಟಕುಗೊಳಿಸಿದ್ದು, ಅದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಅಗತ್ಯವಿದ್ದರೆ ಪ್ರತ್ಯೇಕ ಶಾಸನವ ರೂಪಿಸಿ, ಅದರಡಿ ಇಂತಹ ಆದೇಶ ಮಾಡಬಹುದು. ಶಾಸನದ ಬೆಂಬಲವಿಲ್ಲದೇ ಮೂಲಭೂತ ಹಕ್ಕು ಮೊಟಕುಗೊಳಿಸಲು ಅಥವಾ ನರ‍್ಬಂಧಿಸಲು ಕರ‍್ಯಕಾರಿ ಅಧಿಕಾರವನ್ನು ಬಳಕೆ ಮಾಡಲಾಗದು ಎಂದರು.

ವಾದ ಮಂಡನೆಯ ಒಂದು ಹಂತದಲ್ಲಿ ಪೀಠವು ಇದೇ ಧಾಟಿಯಲ್ಲಿ ಹಾಡಬೇಕು ಎಂಬುದಕ್ಕೆ ರ‍್ಕಾರಕ್ಕೆ ಅಧಿಕಾರ ಎಲ್ಲಿದೆ? ರ‍್ಕಾರ ಕಾನೂನಿನ ಪ್ರಕಾರ ನಡೆಯಬೇಕು. ನಿಮಗೆ ಅಧಿಕಾರ ಎಲ್ಲಿದೆ? ಎಂದು ಕೇಳಿತ್ತು.

 

ಆಗ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌ ಎ ಅಹ್ಮದ್‌ ಅವರು “ಸದನದಲ್ಲಿ ರ‍್ಚೆಯಾಗಿ ವಿರೋಧ ಪಕ್ಷವೂ ಸೇರಿದಂತೆ ಕನ್ನಡದ ಸಂಸ್ಕೃತಿ ವಿಚಾರವನ್ನು ಪ್ರಮುಖವಾಗಿ ಇಟ್ಟುಕೊಂಡು, ಖಾಸಗಿ ಶಿಕ್ಷಣ ಸಂಸ್ಥೆಗಳೂ ಶಿಕ್ಷಣ ಕಾಯಿದೆ ಅಡಿ ಬರುವುದರಿಂದ ಅವರೂ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಈ ಸಂಬಂಧ ಮೆಮೊ ಹಾಕಲಾಗಿತ್ತು. ಶಿಕ್ಷಣ ಹಕ್ಕು ಕಾಯಿದೆಯ ಸೆಕ್ಷನ್‌ ೧೩೩ ಅಡಿಯಲ್ಲಿ ರ‍್ಕಾರಕ್ಕೆ ಹಕ್ಕಿದೆ ಎಂದು ವಿವರಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top