ಅಪಹರಣ ಪ್ರಕರಣ: ಎಚ್ ಡಿ ರೇವಣ್ಣಗೆ ೭ ದಿನ ನ್ಯಾಯಾಂಗ ಬಂಧನ; ರೇವಣ್ಣ ಕಣ್ಣೀರು, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಕರ‍್ಟ್ ೭ ದಿನ ಕಾಲ ನ್ಯಾಯಂಗ ಬಂಧನಕ್ಕೆ ಆದೇಶಿಸಿದೆ.

ಎಸ್ ಐಟಿ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ರೇವಣ್ಣರನ್ನು ಬೆಂಗಳೂರಿನ ೧೭ನೇ ಎಸಿಎಂಎಂ ಕರ‍್ಟ್ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಧೀಶರು ಮೇ ೧೪ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿದ ಹಿನ್ನೆಲೆಯಲ್ಲಿ ಕರ‍್ಟ್ ಹಾಲ್ ನಿಂದ ಹೊರಬಹುವಾಗ ರೇವಣ್ಣ ಕಣ್ಣೀರು ಹಾಕಿದರು. ಇನ್ನ ಎಸ್ಐಟಿ ಅಧಿಕಾರಿಗಳು ರೇವಣ್ಣರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.

ಲೈಂಗಿಕ ದರ‍್ಜನ್ಯ ಆರೋಪ ಮಾಡಿದ್ದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ರೇವಣ್ಣ ಆಪ್ತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

 

ರೇವಣ್ಣ ಸಲ್ಲಿಸಿರುವ ಜಾಮೀನು ರ‍್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಇಂದು ನಡೆಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ರ‍್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ. ಹೀಗಾಗಿ ರೇವಣ್ಣ ಭವಿಷ್ಯ ನಾಳೆ ನರ‍್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಗದ್ದಿದ್ದರೆ ಮೇ ೧೪ರವರೆಗೆ ರೇವಣ್ಣ ಜೈಲಿನಲ್ಲೇ ಇರಬೇಕಾಗುತ್ತದೆ.

Facebook
Twitter
LinkedIn
Telegram
WhatsApp
Email
Facebook

Leave a Comment

Your email address will not be published. Required fields are marked *

Translate »
Scroll to Top