ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆ ಅಪಹಿರಸಿದ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಸೋಮವಾರ (ಮೇ. 13) ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು (ಮೇ 14) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಹೆಚ್ಡಿ ರೇವಣ್ಣ ಅವರು ಮಂಗಳವಾರ ಬಿಡುಗಡೆಯಾಗುತ್ತಾರೆ ಎಂಬ ವಿಚಾರ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್ ಕರ‍್ಯರ‍್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಹೆಚ್ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕರ‍್ಯರ‍್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚರ‍್ಜ್ ಮಾಡಿದರು.
ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಸೋಮವಾರವೇ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ನೀಡುವಷ್ಟರಲ್ಲಿ ನ್ಯಾಯಾಲಯದ ಸಮಯ ಆಗಿದ್ದರಿಂದ ಕರ‍್ಟ್ ಪ್ರಕ್ರಿಯೆಗಳು ಇಂದಿಗೆ (ಮೇ ೧೪) ಮುಂದೂಡಲಾಗಿತ್ತು. ಹೀಗಾಗಿ ಹೆಚ್ಡಿ ರೇವಣ್ಣ ಸೋಮವಾರದ ರಾತ್ರಿಯನ್ನು ಜೈಲಿನಲ್ಲೇ ಕಳೆದರು. ಮಂಗಳವಾರ ಕರ‍್ಟ್ ಪ್ರಕ್ರಿಯೆಗಳು ಮುಗಿದಿದ್ದು, ಇದೀಗ ಜೈಲಿಂದ ಬಿಡುಗಡೆಯಾಗಿದ್ದಾರೆ.
ಏನಿದು ಕಿಡ್ನಾಪ್ ಕೇಸ್?
ಪ್ರಜ್ವಲ್ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ ೨ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.
ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಸಂತ್ರಸ್ತೆ ಹೆಚ್ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಬಳಿಕ ಮೇ 03ರ ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎಸ್ಐಟಿ ಮೂರನೇ ನೋಟಿಸ್ ನೀಡಿತ್ತು.
ಎಸ್ಐಟಿ ನೋಟಿಸ್ ನೀಡುತ್ತಿದ್ದಂತೆ ಮಾಜಿ ಹೆಚ್ಡಿ ರೇವಣ್ಣ ವಕೀಲರ ಮೊರೆ ಹೋಗಿದ್ದು, ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಜಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಸಿದ್ದರು. ಆದರೆ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಬಳಿಕ ಎಸ್ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತ್ತು. ಸೋಮವಾರ ಜಾಮೀನು ಅರ್ಜಿ ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೆಚ್ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.