ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಬಹು ನಿರೀಕ್ಷಿತ ’ಗಾಳಿಪಟ ೨’ ಚಿತ್ರ ಆಗಸ್ಟ್ ೧೨ ರಂದು ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲ? ಅಲ್ಲದೇ ಹೊರರಾಜ್ಯ ಹಾಗೂ ಹೊರದೇಶಗಳಲ್ಲೂ “ಗಾಳಿಪಟ ೨” ಬಿಡುಗಡೆಯಾಗಲಿದೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಬಹಳ ದಿನಗಳ ನಂತರ ಯೋಗರಾಜ್ ಭಟ್ – ಗಣೇಶ್ ಜೋಡಿಯಲ್ಲಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕ? ನಿರೀಕ್ಷೆಯಿದೆ.

ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ “ಗಾಳಿಪಟ ೨” ಜನಮನ ಗೆದ್ದಿದೆ. ಅದರಲ್ಲೂ ಇತ್ತೀಚಿಗೆ ಬಿಡುಗಡೆಯಾದ ಪರೀಕ್ಷೆ ಹಾಡಿಗಂತೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಂತೋ? ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ಅನಂತನಾಗ್, ರಂಗಾಯಣ ರಘು, ಬುಲೆಟ್ ಪ್ರಕಾಶ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಸುಧಾ ಬೆಳವಾಡಿ, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
