KKRDB ಸಭೆ -ಕ್ರಿಯಾ ಯೋಜನೆ ಕೂಡಲೇ ಸಿದ್ಧ ಪಡಿಸಲು ಸಿಎಂ ಸೂಚನೆ

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.

ಈಗ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು.

ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು:

 

ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು 

ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಲಾಯಿತು

 

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಗ ಕಚೇರಿ ಕೃಷ್ಣಾದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು.

 ಸಭೆಯಲ್ಲಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ, ರಹೀಂ ಖಾನ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪೂರ, ಎನ್. ಎಸ್. ಭೋಸರಾಜು, ಶಿವರಾಜ್ ತಂಗಡಗಿ,  ಡಿ.ಸುಧಾಕರ್, ಕೆ.ಕೆ. ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top