ಹಾಲಿನ ದರ ಏರಿಕೆ ಸಾಧ್ಯತೆ | ಸುಳಿವು ನೀಡಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್

Kannada Nadu
ಹಾಲಿನ ದರ ಏರಿಕೆ ಸಾಧ್ಯತೆ | ಸುಳಿವು ನೀಡಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್

ಬೆಂಗಳೂರು: ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳ ಮಾಡುವಂತೆ ರೈತರು ಬೇಡಿಕೆ ಇಟ್ಟಿದ್ದು, ಸಂಕ್ರಾAತಿ ಬಳಿಕ ಈ ಸಂಬAಧ ಸಭೆ ನಡೆಸಿ ದರ ಏರಿಕೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಪ್ರಸ್ತಾವನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆನಡೆಸಲಾಗಿದೆ. ಆದರೆ ಇನ್ನೂ ದರ ಏರಿಕೆ ಬಗ್ಗೆ ನಿರ್ಧಾರವಾಗಿಲ್ಲ. ಸಂಕ್ರಾAತಿ ಹಬ್ಬದ ನಂತರ ಮತ್ತೊಮೆ ಸಭೆ ಸೇರಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಈ ಹಿಂದೆ 50 ಎಂಎಲ್ ಹಾಲನ್ನು ನೀಡುವ ಮೂಲಕ ಲೀಟರ್‌ಗೆ 2 ರೂ. ಹೆಚ್ಚಳ ಮಾಡಲಾಗಿತ್ತು. ಹೆಚ್ಚುವರಿ ಹಾಲನ್ನು ವಾಪಸ್ ಪಡೆಯಲು ಉದ್ದೇಶಿಸಲಾಗಿದೆ. ಹಾಲಿನ ದರ ಹೆಚ್ಚಳ ಕುರಿತಂತೆ ಹಾಲು ಒಕ್ಕೂಟದ ಸಭೆಯಲ್ಲಿ ಚರ್ಚೆಯಾಗಿದ್ದು, ಹೆಚ್ಚಳ ಮಾಡುವಂತೆ ಪ್ರಸ್ತಾಪವೂ ಆಗಿದೆ ಎಂದರು.
ಅಯೋಧ್ಯೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲೂ ನಮ್ಮ ನಂದಿನಿ ತುಪ್ಪ ಕಳೆದ ಹತ್ತು ವರ್ಷಗಳಿಂದ ಬಳಕೆಯಾಗುತ್ತಿದೆ. ತಿರುಪತಿ ಲಡ್ಡು ವಿವಾದದ ನಂತರ ನಂದಿನಿ ತುಪ್ಪಕ್ಕೆ ಶೇ.10ರಿಂದ 15ರಷ್ಟು ಮಾರಾಟ ಹೆಚ್ಚಳವಾಗಿದೆ.ಶಿರಡಿಯಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಬಂದಿದೆ. ಮುಂದಿನ ದಿನಗಳಲ್ಲಿ ಶಿರಡಿಗೂ ತುಪ್ಪ ಸರಬರಾಜು ಮಾಡುವ ವ್ಯವಸ್ಥೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಕೆಎಂಎಫ್‌ನ ಬಜೆಟ್‌ಗೆ ಆರ್‌ಸಿಬಿಯವರು ಒಪ್ಪಿಕೊಂಡರೆ ಮುಂದಿನ ಐಪಿಎಲ್‌ನಲ್ಲಿ ಪ್ರಾಯೋಜಕತ್ವ ಮಾಡಲಾಗುವುದು. ಈ ಸಂಬAಧ ಆರ್‌ಸಿಬಿ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಲಾಗುವುದು ಎಂದು ಭೀಮಾನಾಯಕ್ ಹೇಳಿದರು.
ಬಹಳ ದಿನಗಳಿಂದ ನಂದಿನಿ ಇಡ್ಲಿ-ದೋಸೆ ಹಿಟ್ಟು ಬಿಡುಗಡೆ ಬಗ್ಗೆ ಚರ್ಚೆಯಾಗುತ್ತಿತ್ತು. ಮುಖ್ಯಮಂತ್ರಿ ಅವರು ಈ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದು ಮಾರುಕಟ್ಟೆಯಲ್ಲಿ ಈಗಾಗಲೇ ಲಭ್ಯವಾಗಿದೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತದೆ. ಪ್ರಸ್ತುತ ಇಡ್ಲಿ , ದೋಸೆ ಹಿಟ್ಟಿನ ಮಾರುಕಟ್ಟೆಯಲ್ಲಿ ಶೇ.15ರಿಂದ 20ರಷ್ಟು ನಾವು ಪಾಲು ಪಡೆಯಬೇಕೆಂಬ ಉದ್ದೇಶ ಹೊಂದಿದ್ದೇವೆ. ಬೇರೆ ಕಂಪನಿಯವರು ಪ್ರತಿದಿನ ಮೂರು ಸಾವಿರ ಮೆಟ್ರಿಕ್ ಟನ್‌ನಷ್ಟು ಮಾರಾಟ ಮಾಡುತ್ತಿದ್ದು, ನಾವು 5 ಸಾವಿರ ಮೆಟ್ರಿಕ್ ಟನ್ ಮಾರಾಟ ಮಾಡುವ ಗುರಿ ಹೊಂದಿದ್ದೇವೆ ಎಂದು ಅವರು ತಿಳಿಸಿದರು. 450 ಗ್ರಾಂ ದೋಸೆ ಹಿಟ್ಟಿಗೆ 40 ರೂ, 900 ಗ್ರಾಂ ದೋಸೆ ಹಿಟ್ಟಿಗೆ 80 ರೂ. ನಿಗದಿಪಡಿಸಲಾಗಿದ್ದು, ಶೇ.5ರಷ್ಟು ಪ್ರೋಟೀನ್ ಸೇರಿಸಲಾಗಿದೆ. ಇದರಿಂದ ಮಕ್ಕಳು, ಕ್ರೀಡಾಪಟುಗಳು ಸೇರಿದಂತೆ ಎಲ್ಲ ವಯಸ್ಸಿನವರಿಗೂ ಸಹಾಯಕವಾಗಲಿದೆ. ಬೆಂಗಳೂರು ನಂತರ ಇತರ ಜಿಲ್ಲೆಗಳಲ್ಲೂ ಯಾವ ರೀತಿ ಬೇಡಿಕೆ ಬರಲಿದೆ ಎಂಬುದನ್ನು ಆಧರಿಸಿ ಎಲ್ಲಾ ಕಡೆ ಮಾರಾಟ ಮಾಡುವ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಈ ವೇಳೆ ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕರ ವರ್ಗಾವಣೆ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";