ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ದಿಲ್ಲಿ ಯಾತ್ರೆ ಯಶಸ್ವಿ

ಬೆಂಗಳೂರು : ರಾಜ್ಯದ ಕಾರ್ಮಿಕರಿಗೆ ಹೆಚ್ಚಿನ ಅನುಕೂಲ ಆಗುವಂತೆ ಕೇಂದ್ರದ ಸಹಕಾರ ಕೋರಿರುವ ಸಚಿವ ಶಿವರಾಂ ಹೆಬ್ಬಾರ್, ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರಕ್ಕೆ ಹಲವು ಪ್ರಸ್ತಾವನೆಗಳನ್ನು ಸಲ್ಲಿಸಿದ್ದು, ಈ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ. ಕಾರ್ಮಿಕ ಇಲಾಖೆ ಮತ್ತು ಸ್ವಜಿಲ್ಲೆಯ ಅಭಿವೃದ್ಧಿಗೆ ಸಂಬoಧಿಸಿದoತೆ ದಿಲ್ಲಿ ಪ್ರವಾಸ ಕೈಗೊಂಡಿದ್ದ ಸಚಿವರ ನೇತೃತ್ವದ ನಿಯೋಗವು ಸರತಿಯಂತೆ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ಅಭಿವೃದ್ಧಿ ಪರವಾದ ಚರ್ಚೆ- ಸಮಾಲೋಚನೆಗಳನ್ನು ನಡೆಸಿ ಕೇಂದ್ರದ ಅಗತ್ಯ ಸಹಕಾರ ಕೋರಿದೆ. ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಇಎಸ್ಐ ಆಸ್ಪತ್ರೆಗಳಲ್ಲಿ ಅಸಂಘಟಿತ ಕಾರ್ಮಿಕರಿಗೂ ವೈದ್ಯಕೀಯ ಸೌಲಭ್ಯ ದೊರಕುವಂತೆ ಕ್ರಮವಹಿಸಬೇಕೆಂದು ಮನವಿ ಮಾಡಿದರು ಮತ್ತು ಐಎಸ್ಐ ಆಸ್ಪತ್ರೆಗಳಲ್ಲಿ ‘ಆಯುಷ್’ ವಿಭಾಗಗಳನ್ನು ತೆರೆಯಬೇಕು, ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಒಂದರAತೆ ಇಎಸ್ಐ ಆಸ್ಪತ್ರೆಗಳನ್ನು ತೆರೆಯುವಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.


ರಾಜ್ಯದಲ್ಲಿ ಕೋವಿಡ್ ಸಂದರ್ಭ ಸೇರಿದಂತೆ ಕಾರ್ಮಿಕ ಇಲಾಖೆ ಕಾರ್ಯವೈಖರಿ ಮತ್ತು ವಲಸೆ ಕಾರ್ಮಿಕರ ಸಂಕ್ಷೇಮಕ್ಕೆ ರಾಜ್ಯ ಕೈಗೊಂಡ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಭೂಪೇಂದ್ರ ಯಾದವ್, ರಾಜ್ಯದಲ್ಲಿ ಕಾರ್ಮಿಕ ಸ್ನೇಹಿ ವಾತಾವರಣ ಇರುವ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರಲ್ಲದೆ, ಕೂಡಲೇ ಸ್ಥಳಕ್ಕೆ ಇಎಸ್ಐಸಿ ಪ್ರಧಾನ ನಿರ್ದೇಶಕ ಬಾಟಿಯಾ ಅವರನ್ನು ಕರೆಸಿದರು. ಇಎಸ್ಐಸಿ ಅಧಿಕಾರಿಗಳೊಂದಿಗೆ ಇಎಸ್ಐ ಆಸ್ಪತ್ರೆಗಳ ಸುಧಾರಣೆಗಳ ಬಗ್ಗೆ ಚರ್ಚಿಸಿದ ಸಚಿವ ಹೆಬ್ಬಾರ್, ಪ್ರಾದೇಶಿಕ ಮಂಡಳಿ ಕೈಗೊಂಡಿರುವ ನಿರ್ಧಾರಗಳ ಬಗ್ಗೆಯೂ ಮನವರಿಕೆ ಮಾಡಿಕೊಟ್ಟರು.

69 ಚಿಕಿತ್ಸಾಲಗಳಿಗೆ ಅನುಮತಿಗೆ ಕೋರಿಕೆ: ರಾಜ್ಯ ಕಾರ್ಮಿಕ ಇಲಾಖೆಯು ರಾಜ್ಯದ ವಿವಿಧೆಡೆಗಳಲ್ಲಿ 69 ಚಿಕಿತ್ಸಾಲಯಗಳನ್ನು ತೆರೆಯಲು ಅನುಮತಿ ಕೋರಲಾಗಿದ್ದು, ಈ ಸಂಬoಧ ಕೇಂದ್ರವು ಇದೀಗ 19ಕ್ಕೆ ಅನುಮತಿ ನೀಡಿದ್ದು, ಇನ್ನುಳಿದ 50 ಚಿಕಿತ್ಸಾಲಯಗಳನ್ನು ತೆರೆಯಲು ಅನುಮತಿ ನೀಡುವಂತೆ ಮತ್ತು ಪ್ರತಿ ಜಿಲ್ಲೆಗೆ ಒಂದರoತೆ ಇಎಸ್ಐ ಆಸ್ಪತ್ರೆಗಳನ್ನು ಆರಂಭಿಸಲು ಅನುಮೋದನೆ ಕೊಡಬೇಕು, ಪ್ರಸ್ತುತ ಇರುವ ಆಸ್ಪತ್ರೆಗಳಿಗೆ ಸಿಬ್ಬಂದಿ ಮತ್ತು ಆಧುನಿಕ ಉಪಕರಣಗಳನ್ನು ನೀಡುವ ಮೂಲಕ ಸಶಕ್ತೀಕರಣಗೊಳಿಸಬೇಕೆಂಬ ಮನವಿಯನ್ನು ಇದೇ ವೇಳೆ ಕೇಂದ್ರಕ್ಕೆ ಸಲ್ಲಿಸಲಾಯಿತು. ಜಿಲ್ಲೆಗಳಲ್ಲಿ ಇರುವ ಚಿಕಿತ್ಸಾಲಯಗಳನ್ನು ‘ಆರೋಗ್ಯ ಕಲ್ಯಾಣ ಕೇಂದ್ರ’ಗಳಾಗಿ ಪರಿವರ್ತಿಸಬೇಕು. ಈ ಕಲ್ಯಾಣ ಕೇಂದ್ರಗಳಲ್ಲಿ ಇಸಿಜಿ, ಮೈನರ್ ಓಟಿ, ಆಕ್ಸಿಜನ್ ಸೇವೆಗಳ ಜತೆಗೆ ಅಗತ್ಯ ವೈದ್ಯ ಸಿಬ್ಬಂದಿ ಒದಗಿಸಬೇಕು ಎಂದ ಸಚಿವ ಹೆಬ್ಬಾರ್, ಆ ಮೂಲಕ ಇತರೆ ಆಸ್ಪತ್ರೆಗಳಿಗೆ ಕಳುಹಿಸುವ ಪರಿಪಾಠವನ್ನು ತಡೆಯಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಪ್ರಸ್ತುತ ಏಳು ಇಎಸ್ಐ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಆಸ್ಪತ್ರೆಗಳಿಗೆ ಎಂ.ಐ.ಸಿ.ಯೂ (ಮೆಡಿಕಲ್ ಐಸಿಯು) ವ್ಯವಸ್ಥೆ ಮಾಡಬೇಕು ಮತ್ತು ರಾಜ್ಯದಲ್ಲಿರುವ ವಿಮಾ ಚಿಕಿತ್ಸಾಲಯಗಳಿಗೆ ಸಮರ್ಪಕ ಕಟ್ಟಡ ಇರುವುದಿಲ್ಲ ಹೀಗಾಗಿ ಈ ಚಿಕಿತ್ಸಾಲಯಗಳಿಗೆ ಆಧುನಿಕ ವ್ಯವಸ್ಥೆಗಳೊಂದಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮವಹಿಸುವಂತೆ ಕೇಂದ್ರ ಇಎಸ್ಐ ಅಧಿಕಾರಿಗಳನ್ನು ರಾಜ್ಯ ನಿಯೋಗ ಆಗ್ರಹಪಡಿಸಿತು.

ತೆರಿಗೆ ರಿಯಾಯ್ತಿಗೆ ಮನವಿ: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಸೆಸ್ ಸಂಗ್ರಹದ ಮೂಲಕ ಆರ್ಥಿಕ ಸಂಪನ್ಮೂಲ ಹೊಂದಿದ್ದು, ಈಗಾಗಲೇ ಇತರೆ ಮಂಡಳಿಗಳಾದ ಕಾಫಿ ಬೋರ್ಡ್, ತಂಬಾಕು ಮಂಡಳಿಗೆ ನೀಡಿರುವಂತೆ ಕಾರ್ಮಿಕ ಕಲ್ಯಾಣ ಮಂಡಳಿಗೂ ಸೆಸ್ ಮೇಲಿನ ತೆರಿಗೆಯಿಂದ ರಿಯಾಯ್ತಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಳ್ಳಲಾಯಿತು. ಕಾರ್ಮಿಕ ಇಲಾಖೆ ಅಪರ ಪ್ರಧಾನ ಕಾರ್ಯದರ್ಶಿ ಡಾ.ಜಿ.ಕಲ್ಪನಾ, ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಎಂ.ಪಿ.ಗುರುಪ್ರಸಾದ್, ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ, ಮಂಡಳಿ ಜಂಟಿ ಕಾರ್ಯದರ್ಶಿ ಡಾ.ಶಿವಪುತ್ರ ಬಾಬುರಾವ್ ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ನಿಯೋಗದಲ್ಲಿದ್ದರು.


ಸರ್ವ ಋತು ರಸ್ತೆಗಳ ನಿರ್ಮಾಣಕ್ಕೆ ಮನವಿ :
ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿಗಳ ದುರಸ್ಥಿ ಸೇರಿದಂತೆ ಸರ್ವ ಋತು ರಸ್ತೆಗಳನ್ನು ನಿರ್ಮಿಸಿಕೊಡಬೇಕೆಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಸಂಬAಧ ಮನವಿ ನೀಡಿದ ಸಚಿವರು, ಗುಡ್ಡುಗಾಡು ಸೇರಿದಂತೆ ಅತಿ ಹೆಚ್ಚು ಮಳೆ ಪ್ರದೇಶವಾಗಿರುವ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳನ್ನು ಕೇಂದ್ರ ಸರ್ಕಾರದ ರಸ್ತೆ ನಿಧಿಯಿಂದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕೋರಿದರು.
ಸಚಿವ ಹೆಬ್ಬಾರ್ ಅವರ ಈ ಮನವಿಗೆ ಸ್ಪಂಧಿಸಿದ ಗಡ್ಕರಿ ಈ ಸಂಬoಧ ಅಗತ್ಯ ಕ್ರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹಾವೇರಿ ಎಂಬಿಬಿಎಸ್ ಅನುಮತಿಗೆ ಮನವಿ :
ಇದೇ ವೇಳೆ ರಾಜ್ಯದವರೇ ಆದ ಮತ್ತೋರ್ವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿದ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಿವರಾಂ ಹೆಬ್ಬಾರ್, ಹಾವೇರಿ ಜಿಲ್ಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಂಬoಧ ಚರ್ಚಿಸಿದರಲ್ಲದೆ, ಹಾವೇರಿ ವೈದ್ಯಕೀಯ ಕಾಲೇಜಿಗೆ (ಲೆಟರ್ ಆಫ್ ರ್ಮಿಷನ್) ಎಂಬಿಬಿಎಸ್ ಆರಂಭಿಸಲು ಅನುಮತಿ ಕೊಡಿಸಿಕೊಡುವಂತೆ ಮನವಿ ಮಾಡಿದರು. ಸಚಿವ ಹೆಬ್ಬಾರ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡೋವಿಯಾ ಅವರಿಗೆ ಪತ್ರ ಬರೆದು ಸಚಿವ ಹೆಬ್ಬಾರ್ ಮನವಿಯನ್ನು ಪರಿಗಣಿಸುವಂತೆ ಮನವಿ ಮಾಡುವ ಮೂಲಕ ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ರಸ್ತೆಗಳ ಅಭಿವೃದ್ಧಿ ಮನವಿಗೆ ಪ್ರತಿಯಾಗಿ ಹೆದ್ದಾರಿ ಸಚಿವ ಗಡ್ಕರಿ ಅವರಿಗೂ ಸಹ ಪತ್ರ ಮುಖೇನ ಪರಿಗಣಿಸುವಂತೆ ಹೇಳಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top