ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟವರು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರೈಲ್ವೆ ದುರಂತವಾದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರು  ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

 

ಜವಾಹರಲಾಲ್ ನೆಹರೂ ಅವರ ನಂತರ ದೇಶದ ಪ್ರಧಾನಿಗಳಾಗಿದ್ದವರು. ಜೈ ಜವಾನ್ ಜೈ ಕಿಸಾನ್ ಎಂದು  ಕರೆ ಕೊಟ್ಟವರು. ಆಹಾರ ಸ್ವಾವಲಂಬನೆ ಆಗದಿದ್ದ ಸಂದರ್ಭದಲ್ಲಿ ಇಡೀ ದೇಶದ ಜನ ಒಂದು ದಿನದ ಉಪವಾಸ ಮಾಡಲು ಕರೆ ಕೊಟ್ಟಿದ್ದ ಅವರು  ಅಲ್ಪಾವಧಿ ಪ್ರಧಾನ ಮಂತ್ರಿ ಆಗಿದ್ದರೂ ಆಹಾರ ಸ್ವಾವಲಂಬನೆಗೆ ಪ್ರಯತ್ನ ಮಾಡಿದರು ಎಂದರು. 

ಪ್ರಾಮಾಣಿಕ ರಾಜಕಾರಣಿ

 ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿ ಗೆದ್ದಿದ್ದರು. ಅತ್ಯಂತ ಪ್ರಾಮಾಣಿಕ ರಾಜಕಾರಣಿ  ಹಾಗೂ ಸ್ವಾತಂತ್ರ್ಯ ಹೋರಾಟಗಾರರು.  ಅವರ ಪುಣ್ಯತಿಥಿಯನ್ನು ಇಡೀ ದೇಶದಲ್ಲಿ ಆಚರಿಸಲಾಗುತ್ತಿದೆ. ಅವರಿಗೆ ಗೌರವ ನಮನಗಳನ್ನು ಸಲ್ಲಿಸಲಾಗಿದೆ ಎಂದರು.

ಶ್ರೀರಾಮಚಂದ್ರನನ್ನು ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ:

ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ  ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

 

 

ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ ಎಂದರು. 

ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ  ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಎಂದರು.

ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು.

ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ

 

ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿ ಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಲ್ಲಿಯೂ ಪೂಜೆ ನಡೆಯಲಿದೆ ಎಂದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top