ನವದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ. ಅವರನ್ನು ಶುಕ್ರವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆಯು ವರದಿ ಮಾಡಿದೆ
