ವಕೀಲ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನ

ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ವಕೀಲ ಮತ್ತು ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ರಾತ್ರಿ ಬಂಧಿಸಿದ್ದಾರೆ.

ವಕೀಲ ದೇವರಾಜೆಗೌಡ ಮೇಲೆಯೇ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿ ವೀಡಿಯೋ ಕೂಡ ಬಿಡುಗಡೆ ಮಾಡಿದ್ದರು. ಈ ಸಂಬಂದವಾಗಿ ಪ್ರಕರಣ ದಾಖಲಾದ ಬೆನ್ನಿಗೇ ಆರೋಪಿ ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಹೊಳೆನರಸೀಪುರ ಪೋಲಿಸರು ಹಿರಿಯೂರು ತಾಲೂಕಿನ ಗೂಯಿಲಾಳು ಟೋಲ್ ಬಳಿ ಆರೋಪಿ ಇರುವ ಖಚಿತ ಮಾಹಿತಿ ಪಡೆದು ಬಂಧಿಸಿದ್ದಾರೆ.

ಬಿಜೆಪಿ ಮುಖಂಡರೂ ಆಗಿರುವ ದೇವರಾಜೇಗೌಡ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮಾಹಿತಿ ಹೊಂದಿದವರಾಗಿದ್ದಾರೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ, ಪ್ರಜ್ವಲ್ ರೇವಣ್ಣ ವಿರುದ್ಧ ಹರಿಹಾಯ್ದಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿಗೂ ಮೊದಲು (2023 ರಲ್ಲಿ) ಬಿಜೆಪಿಗೆ ಪತ್ರ ಬರೆದಿದ್ದರು.

ಇವರ ವಿರುದ್ಧ ಹಾಸನ ಮೂಲದ 36 ವರ್ಷದ ಮಹಿಳೆ ತಮ್ಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ಲೈಂಗಿಕ ಕಿರುಕುಳ ಕೊಟ್ಟಿದ್ದರು ಎಂದು ಆರೋಪಿಸಿದ್ದಾರೆ. ಆಗಾಗ ವಿಡಿಯೋ ಕರೆ ಮಾಡಿ ಅಂಗಾಂಗ ತೋರಿಸುವಂತೆ ಪೀಡಿಸಿ ಮಾನಸಿಕ ಕಿರುಕುಳ ಕೊಟ್ಟಿದ್ದಾರೆ ಎಂದು ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.

 

ಮಹಿಳೆಯ ಈ ದೂರು ಆಧರಿಸಿ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದೇವರಾಜೇಗೌಡ ಮೇಲೆ FIR ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅವರನ್ನು ಹಿರಿಯೂರಲ್ಲಿ ಪೊಲೀಸರು ಬಂಧಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top