ವೀರ ಮಹಿಳೆ ಕಿತ್ತೂರು ಚೆನ್ನಮ್ಮಳಿಗೆ ಅಪಮಾನ, ಕಾಂಗ್ರೆಸ್‌ ಕ್ಷಮೆ ಕೋರಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Kannada Nadu
ವೀರ ಮಹಿಳೆ ಕಿತ್ತೂರು ಚೆನ್ನಮ್ಮಳಿಗೆ ಅಪಮಾನ, ಕಾಂಗ್ರೆಸ್‌ ಕ್ಷಮೆ ಕೋರಲಿ:  ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರುಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆಕಾಂಗ್ರೆಸ್‌ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹೆಸರಿಡಬೇಕಿತ್ತು. ಸೋನಿಯಾ ಗಾಂಧಿಯಾಗಲೀರಾಹುಲ್‌ ಗಾಂಧಿಯಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ. ಇದು 60 ಪರ್ಸೆಂಟ್‌ ವಸೂಲಿ ಮಾಡುವ ನೆನಪಿನ ಜಾತ್ರೆಯೇ ಹೊರತು ಸಮಾವೇಶವಲ್ಲ ಎಂದರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದುಬ್ಯಾಂಕ್‌ ದರೋಡೆಮಹಿಳೆ ಮೇಲೆ ಅತ್ಯಾಚಾರ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸರ್ಕಾರ ಸಮಾವೇಶ ಮಾಡಿದೆ. ಅಭಿವೃದ್ಧಿ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸುತ್ತಾರೆ ಎಂದರೆ ಕಾಂಗ್ರೆಸ್‌ ಹೇಗೆ ಭಿನ್ನವಾಗುತ್ತದೆಕಾಂಗ್ರೆಸ್‌ ಶಾಸಕರು ಕೂಡ ಅನುದಾನ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ ಸರಳವಾಗಿರಬೇಕು ಎಂದು ಹೇಳಿದ್ದಾರೆ. ಆದರೆ ಕಟೌಟ್‌ಗಳ ವಿಜೃಂಭಣೆ ಅಲ್ಲಿ ಕಂಡುಬಂದಿದೆ. ಇದು ನಕಲಿ ಗಾಂಧಿಗಳ ಸಮಾವೇಶ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಕರ್ನಾಟಕದ ವೀರ ಮಹಿಳೆ. ಅವರನ್ನು ಪ್ರಿಯಾಂಕಾ ವಾದ್ರಾಗೆ ಹೋಲಿಕೆ ಮಾಡುವುದು ಅಕ್ಷಮ್ಯ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೂಡಲೇ ಜನರ ಕ್ಷಮೆ ಯಾಚಿಸಬೇಕು. ಇದರಿಂದ ಚೆನ್ನಮ್ಮಳಿಗೆ ಅಪಮಾನವಾಗಿದೆ. ಕಾಂಗ್ರೆಸ್‌ ಪಕ್ಷ ಕೂಡ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸಂಘಟನಾ ಸಭೆ ನಡೆದಿದ್ದುತಾಲೂಕು ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಬಂದ ನಂತರ ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ನಾವ್ಯಾರೂ ತೀರ್ಮಾನ ಮಾಡುವುದಿಲ್ಲ. ಅದನ್ನು ಹಿರಿಯ ನಾಯಕರು ಮಾತ್ರ ಮಾಡುತ್ತಾರೆ. ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೇ ವರಿಷ್ಠರ ಜೊತೆ ಮಾತನಾಡಲಿದ್ದಾರೆ ಎಂದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";