ವಿಧಾನಮಂಡಲದ ಅಧಿವೇಶನವು ಜುಲೈ 21ರವರೆಗೆ ಮುಂದುವರಿಕೆ – ಸಭಾಧ್ಯಕ್ಷ ಯು.ಟಿ.ಖಾದರ್

ಬೆಂಗಳೂರು : ವಿಧಾನ ಮಂಡಲದ ಅಧಿವೇಶನವು 21ನೇ ಜುಲೈ 2023ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದ ಮಧ್ಯೆ ಸಭಾಧ್ಯಕ್ಷರು  ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ  ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ. ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ ಎಂದು ತಿಳಿಸಿದರು.

Facebook
Twitter
LinkedIn
WhatsApp
Telegram

Leave a Comment

Your email address will not be published. Required fields are marked *

Translate »
Scroll to Top