ಬೀದರ್ : ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ “ಲೋಕನಾಯಕ” ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿದರು.
ಶತಮಾನೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಅಧ್ಯಕ್ಷರಾಗಿದ್ದ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.
ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಪರಿಹಾರವನ್ನು ಕೊಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಪರಿಹಾರ ಕೊಡಬೇಕು. ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಪರಿಹಾರವನ್ನು ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರಕ್ಕೆ ಬರದ ಬಗ್ಗೆ ಚಿಂತೆ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬರ ಎದುರಿಸುವ ಕೆಲಸವನ್ನು ಸರ್ಕಾರ ಈಗಾಗಲೇ ಮಾಡಿದೆ. ಕೇಂದ್ರ ಸರ್ಕಾರಕ್ಕೆ 150 ಮಾನವ ದಿನಗಳ ಉದ್ಯೋಗ ನೀಡುವಂತೆ ಕೋರಿ ಪತ್ರವನ್ನು ಬರೆಯಲಾಗಿದೆ. ಅನುಮತಿಯನ್ನು ಕೇಂದ್ರ ಸರ್ಕಾರ ಕೊಡಬೇಕು.. ಸೆಪ್ಟೆಂಬರ್ ತಿಂಗಳಲ್ಲಿ ಮನವಿ ನೀಡಿದ ನಂತರ ಅಕ್ಟೋಬರ್ ತಿಂಗಳಲ್ಲಿ ಕೇಂದ್ರ ಬರ ಅಧ್ಯಯನ ತಂಡ ಬಂದು ಭೇಟಿ ನೀಡಿ ಹೋಗಿದ್ದರೂ ಈವರೆಗೆ ಯಾವುದೇ ಪರಿಹಾರ ನೀಡಿಲ್ಲ. ಮೊದಲನೇ ಹಂತದಲ್ಲಿ ರೈತರಿಗೆ 2000 ರೂ.ಗಳ ವರೆಗೆ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದರು.
ನಮ್ಮ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ
ಛತ್ತಿಸಗಡ, ಮಧ್ಯಪ್ರದೇಶ, ತೆಲಂಗಾಣ ಗೆಲ್ಲುವ ವಿಶ್ವಾಸವಿದೆ. ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ ನಮ್ಮ ಶಾಸಕರ್ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದರು.
ಪುಸ್ತಕ ಓದಿದರೆ ಯುವ ಪೀಳಿಗೆಗೆ ಬಹಳ ಅನುಕೂಲ
ಇಂದು ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಭಿನಂದನಾ ಗ್ರಂಥವನ್ನೂ ಬಿಡುಗಡೆ ಮಾಡಿದ್ದೇನೆ. ಪುಸ್ತಕದಲ್ಲಿ ಅವರ ಒಡನಾಡಿಗಳು, ಸಹಚರರು, ಅರ್ಥಮಾಡಿಕೊಂಡವರು ಅನೇಕ ಲೇಖನಗಳನ್ನು ವಸ್ತುಸ್ಥಿತಿ ಆಧಾರದÀ ಮೇಲೆ ಬರೆದಿದ್ದಾರೆ. ಈ ಲೇಖನಗಳನ್ನು ಓದಿದರೆ ಯುವ ಪೀಳಿಗೆಗೆ ಬಹಳ ಅನುಕೂಲವಾಗುತ್ತದೆ. ಖಂಡ್ರೆ ಅವರು ಬಾಲ್ಯದಿಂದಲೂ ಹೋರಾಟಗಾರರು. ರಾಜಕೀಯ, ಶಿಕ್ಷಣ, ಸಹಕಾರ ಸಾಹಿತ್ಯ ಬಸವಾದಿ ಶರಣರ ವಚನ ಸಾಹಿತ್ಯವನ್ನು ಪ್ರಚಾರ ಮಾಡುವ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ ಎಂದರು.
ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಆಂಧ್ರ ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ನೂರಕ್ಕೂ ಅಧಿಕ ಮಹಾಸ್ವಾಮಿಗಳು ಮತ್ತು ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ನೂರಕ್ಕೂ ಹೆಚ್ಚು ಹಾಲಿ, ಮಾಜಿ ಸಚಿವರು, ಶಾಸಕರು, ನಾಯಕರುಗಳು ಉಪಸ್ಥಿತರಿದ್ದರು.