ಲೋಕಸಭೆ ಚುನಾವಣೆ: ನವದೆಹಲಿ ಕ್ಷೇತ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋನಿಯಾ, ರಾಹುಲ್ ಮತದಾನ

ನವದೆಹಲಿ: ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಲ್ಲಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮರ‍್ಮು ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ತಮ್ಮ ಹಕ್ಕು ಚಲಾಯಿಸಿದರು.

ಬೆಳಿಗ್ಗೆ ೯ ಗಂಟೆ ಸುಮಾರಿಗೆ ಡಾ ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದಲ್ಲಿರುವ ಮತಗಟ್ಟೆಗೆ ತಲುಪಿ ಮತ ಚಲಾಯಿಸಿದರು. ನಂತರ ಅವರು ಮತಗಟ್ಟೆಯ ಹೊರಗೆ ಮಾಧ್ಯಮದ ವ್ಯಕ್ತಿಗಳಿಗೆ ತನ್ನ ಶಾಯಿಯ ಬೆರಳನ್ನು ತೋರಿಸಿದರು.

ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಶನಿವಾರ ನಡೆದ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ನವದೆಹಲಿ ಕ್ಷೇತ್ರದಲ್ಲಿ ಮತ ಚಲಾಯಿಸಿದರು.

ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬೆಳಿಗ್ಗೆ ೯.೩೦ ರ ಸುಮಾರಿಗೆ ನರ‍್ಮಾಣ ಭವನದಲ್ಲಿ ಸ್ಥಾಪಿಸಲಾದ ಮತಗಟ್ಟೆಗೆ ತಲುಪಿ ಮತದಾನ ಮಾಡಿದರು. ದೆಹಲಿಯ ಏಳು ಕ್ಷೇತ್ರಗಳಿಗೆ — ಚಾಂದಿನಿ ಚೌಕ್, ಈಶಾನ್ಯ ದೆಹಲಿ, ಪರ‍್ವ ದೆಹಲಿ, ನವದೆಹಲಿ, ವಾಯುವ್ಯ ದೆಹಲಿ, ಪಶ್ಚಿಮ ದೆಹಲಿ ಮತ್ತು ದಕ್ಷಿಣ ದೆಹಲಿ — ಬೆಳಿಗ್ಗೆ ೭ ಗಂಟೆಗೆ ಮತದಾನ ಪ್ರಾರಂಭವಾಯಿತು.

IಓಆIಂ ಬಣದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ದೆಹಲಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಒಟ್ಟಿಗೆ ಸ್ರ‍್ಧಿಸಿವೆ. ಎಎಪಿ ನಾಲ್ಕು ಸ್ಥಾನಗಳಲ್ಲಿ ಸ್ರ‍್ಧಿಸಿದ್ದರೆ, ಉಳಿದ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ರ‍್ಥಿಗಳನ್ನು ಕಣಕ್ಕಿಳಿಸಿದೆ.

 

ಎಎಪಿಯ ಸೋಮನಾಥ್ ಭರ‍್ತಿ ಅವರು ನವದೆಹಲಿ ಲೋಕಸಭಾ ಕ್ಷೇತ್ರದಿಂದ IಓಆIಂ ಬಣದ ಅಭ್ರ‍್ಥಿಯಾಗಿದ್ದಾರೆ. ಅವರು ಬಿಜೆಪಿಯ ಬಾನ್ಸುರಿ ಸ್ವರಾಜ್ ವಿರುದ್ಧ ಸ್ರ‍್ಧಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top