ಲೋಕಸಭಾ ಚುನಾವಣೆ: ವಿಜಯಪುರ, ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ!

ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಿಜಯಪುರ ಮತ್ತು ಬಳ್ಳಾರಿಯಲ್ಲಿ ಸರ‍್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ದೆಹಲಿಯಿಂದ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಆಗಮಿಸುವ ರಾಹುಲ್ ಗಾಂಧಿ, ಬಳಿಕ ವಿಜಯಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಬರಲಿದ್ದಾರೆ. ಮಧ್ಯಾಹ್ನ ೧೨.೩೦ ಸೋಲಾಪುರ ರಸ್ತೆಯಲ್ಲಿರುವ ಬಿಎಲ್ ಡಿಇ ಹೊಸ ಕ್ಯಾಂಪಸ್ ನಲ್ಲ ನಡೆಯಲಿರುವ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಮಾವೇಶದಲ್ಲಿ ಸುಮಾರು ೫೦ ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ. ಸಮಾವೇಶಕ್ಕಾಗಿ ಬೃಹತ್ ಪೆಂಡಾಲ್ ಹಾಕಲಾಗಿದೆ. ಕೂರಲು ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

 

 

ನಂತರ ಮಧ್ಯಾಹ್ನ ೩.೩೦ಕ್ಕೆ ಆರಂಭವಾಗಲಿರುವ ಎರಡನೇ ಸರ‍್ವಜನಿಕ ಸಭೆಗಾಗಿ ಬಳ್ಳಾರಿಗೆ ತೆರಳಲಿದ್ದಾರೆ. ಮೇ ೭ ರಂದು ಚುನಾವಣೆ ರಾಜ್ಯದ ೧೪ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top