ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್‌ ಜಾರಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್‌ನ್ನು ಜಾರಿ ಮಾಡಲಾಗಿದೆ.

ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ತನಿಖೆ ನಡೆಸುತ್ತಿರುವ ರಾಜ್ಯದ ವಿಶೇಷ ತನಿಖಾ ತಂಡ ಈ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದಾರೆಂಬ ಮಾಹಿತಿ ಮೇರೆಗೆ ಎಸ್ಐಟಿ ತಂಡ ಪ್ರಜ್ವಲ್ ಅವರ ಪತ್ತೆಗೆ ಲುಕ್‌ಔಟ್ ನೋಟಿಸ್‌ನ್ನು ಜಾರಿ ಮಾಡಿ ಎಲ್ಲ ವಿಮಾನ ನಿಲ್ದಾಣದ ವಲಸೆ ವಿಭಾಗಕ್ಕೆ ಈ ನೋಟಿ‌ಸ್‌ನ್ನು ತಲುಪಿಸಿ, ಪ್ರಜ್ವಲ್ ಅವರು ಕಂಡ ತಕ್ಷಣವೇ ಅವರನ್ನು ವಶಕ್ಕೆ ಪಡೆಯುವಂತೆ ನೋಟಿಸ್‌ನಲ್ಲಿ ಹೇಳಿದೆ.

 

ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್ ಅವರು ಪತ್ತೆಯಾಗದಿದ್ದರೆ ಅವರ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ.

 

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಜತೆಗೆ ಹೊಳೆನರಸೀಪುರ ಠಾಣೆಗೆ ಓರ್ವ ಸಂತ್ರಸ್ತೆ ದೂರು ನೀಡಿದ್ದರು. ಈ ದೂರನ್ನಾಧರಿಸಿ ಹೊಳೆನರಸಿಪುರ ಪೊಲೀಸರು ಮಾಜಿ ಸಚಿವ ರೇವಣ್ಣ ಮತ್ತ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ದಾಖಲಾಗುತ್ತಿದ್ದತೆ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ರವರಿಗೆ ಸಂಕಷ್ಟ ಎದುರಾಗಿತ್ತು ಇದೆಲ್ಲದರ ನಡುವೆ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದರು.

 

ಇವರಿಬ್ಬರಿಗೂ ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ತಂಡ ನೋಟಿಸ್ ಜಾರಿ ಮಾಡಿತ್ತಾದರೂ ನಿನ್ನೆ ಇವರಿಬ್ಬರು ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದರು.

 

ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ತಮ್ಮ ವಕೀಲರ ಮೂಲಕ ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇದನ್ನು ಸಾಮಾಜಿಕ ಜಾಲತಾಣದಲ್ಲೂ ಪೋಸ್ಟ್ ಮಾಡಿದ್ದ ಪ್ರಜ್ವಲ್ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ 7 ದಿನಗಳ ಕಾಲ ಕಾಲಾವಕಾಶ ಕೊಡುವಂತೆ ವಕೀಲರ ಮೂಲಕ ಎಸ್ಐಟಿ ತಂಡಕ್ಕೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಹೇಳಿದ್ದರು.

 

 

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ನಿನ್ನೆ ವಿಚಾರಣೆಗೆ ಗೈರು ಹಾಜರಾಗಿದ್ದರು. ಅವರು ಇಂದು ವಿಚಾರಣೆಗೆ ಹಾಜರಾಗುವರು ಎಂದು ಹೇಳಲಾಗುತ್ತಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top