ಬಳ್ಳಾರಿ: ಶಿವರಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವದ ಮೆರವಣಿಗೆಗೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿಯ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ, ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ಡಿಸಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಎಡಿಸಿ ಮಂಜುನಾಥ ಸೇರಿದಂತೆ ಇನ್ನೀತರರು ಇದ್ದರು.ಮೆರವಣಿಗೆಯು ಶ್ರೀ ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ಬಸವ ಭವನದವರೆಗೆ ನಡೆಯಿತು.ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಕಲಾತಂಡಗಳ ಪ್ರದರ್ಶನ ಗಮನಸೆಳೆಯಿತು.
