ಗ್ರಾಮೀಣ ಪ್ರದೇಶದ ಜನರಿಗೆ ಸಹಕಾರ ಸಂಘದಿಂದ ಅನೇಕ ಸೌಲಭ್ಯಗಳು

ದೇವನಹಳ್ಳಿ, ಡಿಸೆಂಬರ್,23 : ಖಾದಿ ಗ್ರಾಮೋದ್ಯೋಗ ಸಹಕಾರ ಸಂಘಕ್ಕೆ ಸರ್ಕಾರದಿಂದ ಹೆಚ್ಚಿನ ಕಾರ್ಯಕ್ರಮಗಳನ್ನು ರೂಪಿಸಿ ಸಾಲ ಸೌಲಭ್ಯಗಳನ್ನು ನೀಡಬೇಕು ಎಂದು ಮಾಜಿ ಸಂಸದ ಸಿ.ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಬಸವೇಶ್ವರ ಕಲ್ಯಾಣ ಮಂದಿರದಲ್ಲಿ ತಾಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕ ವಿವಿಧೋದ್ದೇಶ ಸಹಕಾರ ಸಂಘ ವತಿಯಿಂದ ಹಮ್ಮಿಕೊಂಡಿದ್ದ 2020-21 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘಕ್ಕೆ ಕೇಂದ್ರಸರ್ಕಾರದ ಮಟ್ಟದಲ್ಲಿ ಸಾಲಸೌಲಭ್ಯಗಳು ಸರ್ಕಾರಕ್ಕೆ ಒತ್ತಾಯ ಮಾಡಿ ಪ್ರಯತ್ನಸಿದ್ದರು. ಸಹಕಾರಿ ತತ್ವದ ಅಡಿಯಲ್ಲಿ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಸಹಕಾರ ಸಂಘಗಳ ಮೂಲಕ ನಾನಾ ರೀತಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿದೆ ಎಂದರು. ಮಾಜಿ ಶಾಸಕ ಮುನಿನರಸಿಂಹಯ್ಯ ಮಾತನಾಡಿ, ತಾಲೂಕು ಖಾದಿ ಬೋರ್ಡ್ ಗೆ ತನ್ನದೇ ಆದ ಇತಿಹಾಸ ಇದೆ. ತಾಲೂಕಿನಲ್ಲಿ ಪಿಕಾರ್ಡ್ ಬ್ಯಾಂಕ್ ಮತ್ತು ತಾಲೂಕು ಸೊಸೈಟಿಗಳು ಕಾಂಗ್ರೆಸ್ ವಶದಲ್ಲಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಧಕ್ಕೆಗೆ ಮಾಡಿಕೊಳ್ಳಲು ಪ್ರಯತ್ನಿಸಬೇಕು. ರೈತರ ಬದುಕು ಹಸನಾಗಲು ಸಹಕಾರ ಸಂಘಗಳ ಪಾತ್ರ ಅತಿ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದ ರೈತರಿಗೆ ಹೆಚ್ಚು ಹೆಚ್ಚು ಸಾಲಗಳು ನೀಡುವುದರಿಂದ ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ ಕನಿಷ್ಟ ೨ಕೋಟಿವರೆಗಾದರೂ ಸಾಲಸೌಲಭ್ಯಗಳನ್ನು ನೀಡಬೇಕು. ಪ್ರತಿ ಹಳ್ಳಿಯಲ್ಲೂ ಸ್ವಂತ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೇ ಸಣ್ಣ ಕೈಗಾರಿಕೆಗಳನ್ನು ಮಾಡಿ ಅನುಕೂಲ ಕಲ್ಪಿಸಬೇಕು. ಸಹಕಾರ ಸಂಘಗಳು ಬಲಿಷ್ಟವಾಗಿರಬೇಕು. ಸಹಕಾರ ಸಂಘಗಳು ಹೆಚ್ಚಿನ ಅಭಿವೃದ್ದಿ ಸಾಧಿಸುವಂತೆ ಆಗಬೇಕು ಎಂದು ಹೇಳಿದರು. ತಾಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಸ್.ನಾಗೇಗೌಡ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಖಾದಿ ಭಂಡಾರ ಮಳಿಗೆಯನ್ನು ನಿರ್ಮಿಸಲಾಗುವುದು. ತಾಲೂಕು ಗ್ರಾಮೋದ್ಯೋಗ ಕಸಬುದಾರರ ಕೈಗಾರಿಕೆ ಸಹಕಾರ ಸಂಘದಿಂದ ಬರುವ ಸೌಲಭ್ಯಗಳನ್ನು ಸದಸ್ಯರಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಸಂಘದಿಂದ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ. ಈಗಾಗಲೇ ವಾಣಿಜ್ಯ ಸಂಕೀರ್ಣಗಳು ನಿರ್ಮಾಣವಾಗಿವೆ. ಎಂದು ಹೇಳಿದರು.

ಈ ವೇಳೆಯಲ್ಲಿ ಮಾಜಿ ಜಿಪಂ ಅಧ್ಯಕ್ಷ ಬಿ.ರಾಜಣ್ಣ, ಮಾಜಿ ಸದಸ್ಯ ಲಕ್ಷ್ಮೀನಾರಾಯಣಪ್ಪ, ಕೆಪಿಸಿಸಿ ಸದಸ್ಯ ಚೇತನ್ ಗೌಡ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುನಿರಾಜು, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಶ್ರೀನಿವಾಸ್ ಗೌಡ, ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಎ.ಸಿ.ನಾಗರಾಜ್, ತಾಪಂ ಮಾಜಿ ಸದಸ್ಯರಾದ ಲಕ್ಷ್ಮಣ್ ಗೌಡ, ಸಿ.ವಿಜಯಕುಮಾರ್, ಸಂಘದ ಕಾರ್ಯದರ್ಶಿ ಎಚ್.ಎನ್.ಶ್ರೀನಿವಾಸ್‌ಮೂರ್ತಿ, ಸಂಘದ ಉಪಾಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ನಿರ್ದೇಶಕರಾದ ಪಟಾಲಪ್ಪ, ಲಕ್ಷ್ಮಣ್‌ಮೂರ್ತಿ, ಆರ್.ಜಯರಾಮ್, ಸೈಫುಲ್ಲಾ, ಡಿ.ಮುನಿರಾಜು, ನಾರಾಯಣಸ್ವಾಮಿ, ನಾಗಮಣಿ, ಮಂಜುಳಾ, ಸುನಂದಮ್ಮ, ಇದ್ದರು.

Leave a Comment

Your email address will not be published. Required fields are marked *

Translate »
Scroll to Top