ಬಳ್ಳಾರಿ : ಬಿಜೆಪಿ ಮಹಿಳಾ ಮೋರ್ಚಾ ಘಟಕದ ವತಿಯಿಂದ ನಗರದ ಬಸವ ಭವನದಲ್ಲಿಂದು ಮಹಿಳಾ ಮಾತೃ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾವೇಶದಲ್ಲಿ ಭಾಗಿಯಾದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರದಿಂದ ಮಹಿಳೆಯರಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮಹಿಳಾ ಸಬಲೀಕರಣಕ್ಕೆ ಪ್ರಥಮ ಆದ್ಯತೆ ನೀಡಲಾಗಿದೆ. ಅಂತೆಯೇ ದೇಶದ ಶಾಂತಿ, ಸುಭದ್ರತೆಗಾಗಿ ಮೋದಿಯವನ್ನು ಮತ್ತೊಂದು ಅವಧಿಗೆ ಪ್ರಧಾನ ಮಂತ್ರಿಯನ್ನಾಗಿಸಬೇಕಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ನನಗೆ ಮತ ನೀಡಿದಲ್ಲಿ ಮೋದಿಯವರ ಕೈ ಬಲಪಡಿಸಿದಂತಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ವಿಧಾನಪರಿಷತ್ ಸದಸ್ಯರಾದ ಭಾರತೀ ಶೆಟ್ಟಿ, ಕೊಪ್ಪಳ
ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ, ರಾಜ್ಯ ಮಹಿಳಾ ಮೋರ್ಚ ಸಹ ಸಂಚಾಲಕಿ ಭವ್ಯ ಅಂಬರೀಶ್, ಬಳ್ಳಾರಿ
ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ನಾಯ್ಡು, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ಕೆ.ಸುಗುಣ, ಜೆಡಿಎಸ್
ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ, ಮಹಿಳಾ ಮೋರ್ಚಾ
ಜೆಡಿಎಸ್ ಜಿಲ್ಲಾಧ್ಯಕ್ಷೆ ಭವಾನಿ ಸೇರಿದಂತೆಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಹಾಗೂ
ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯ ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿ ಈ ಭಾರಿ
ಬಿಜೆಪಿ ಜಯಭೇರಿ ಭಾರಿಸಲಿದೆ ಎಂಬ ಭರವಸೆಯನ್ನು ನೀಡಿದರು.
ಬಿಜೆಪಿ ಮಹಿಳಾ ಮುಖಂಡರಾದ ಲಕ್ಷ್ಮೀ ಅರುಣಾ ಅವರು ಮಾತನಾಡಿ, ದೇಶಕ್ಕೆ ಮೋದಿ, ಬಳ್ಳಾರಿಗೆ ಶ್ರೀರಾಮುಲು ಎಂಬಂತೆ ಬಿಜೆಪಿಯ ಮಹಿಳಾ ಕಾರ್ಯಕರ್ತರು ಪ್ರತೀ ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನಮುಟ್ಟುವಂತೆ ತಿಳಿಸಬೇಕು. ಹಾಗೆಯೇ ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡುವಂತೆ ಮನವೊಲಿಸಬೇಕು ಎಂದು ಕರೆ ನೀಡಿದರು.