ಕನ್ನಡಿಗರ ಮುಂದೆ ಪವಿತ್ರಾ‌ – ನರೇಶ್ ಮತ್ತೆ ಮದುವೆ

      ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿರುವ ‘ಮತ್ತೆ ಮದುವೆ’ ಸಿನಿಮಾ  ರಾಜ್ಯಾದ್ಯಂತ ಬಿಡುಗಡೆಯಾಗಿದೆ. 

 

      ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಟೈಟಲ್ ನಡಿ ತೆರೆಕಂಡ ಈ ಸಿನಿಮಾ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಪವಿತ್ರಾ ಹಾಗೂ ನರೇಶ್,  ಈ ಜೋಡಿ ಬೆಂಗಳೂರಿನಲ್ಲಿ ಪ್ರಚಾರ ನಡೆಸಿ  ‘ಮತ್ತೆ ಮದುವೆ’ ಬಗ್ಗೆ  ಸಾಕಷ್ಟು ವಿಷಯ ಹಂಚಿಕೊಂಡರು.

     ನಟ ನರೇಶ್ ಮಾತನಾಡಿ “ಮತ್ತೆ‌ ಮದುವೆ ಒಳ್ಳೆಯ ಕಂಟೆಂಟ್ ಇರುವ, ಸದ್ಯ ಸಮಾಜದಲ್ಲಿ ಗಂಡ, ಹೆಂಡತಿ ಸಂಬಂಧಗಳ ಕುರಿತ ಕಥಾಹಂದರವನ್ನು ಹೊಂದಿದೆ. ಈ ಸಿನಿಮಾ ನೋಡಿದವರೆಲ್ಲ ಚೆನ್ನಾಗಿದೆ ಎಂದು ಒಳ್ಳೆಯ ಪ್ರತಿಕ್ರಿಯೆ ನೀಡುತ್ತಿದ್ದಾರೆ” ಎಂದು ಹೇಳಿದರು. ಮತ್ತೆ ಮದುವೆ ಚಿತ್ರದ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡಿರುವುದಾಗಿ ತಿಳಿಸಿದರು.  

     ಪವಿತ್ರಾ‌ ಲೋಕೇಶ್ “ವಿಜಯ್ ಕೃಷ್ಣ ಮೂವೀಸ್ ಮತ್ತೆ ಲಾಂಚ್ ಮಾಡಿ ಒಳ್ಳೆ ಸಿನಿಮಾ ಮಾಡಬೇಕು. ಈ ಬ್ಯಾನರ್ ನಲ್ಲಿ ಹಿಂದೆ ಬಂದ ಸಿನಿಮಾಗಳು ಮೆಸೇಜ್ ಓರಿಯೆಂಟೆಡ್ ಆಗಿತ್ತು. ಸಮಾಜಕ್ಕೆ ಒಳ್ಳೆ ವಿಷಯ ತಲುಪಿಸುವ ಕೆಲಸ ಮಾಡಿದ್ದರು. ವಿಜಯ್ ಕೃಷ್ಣ ಮೂವೀಸ್ ನಡಿ ಮತ್ತೊಂದು ಮೆಸೇಜ್ ಕೊಡುವಂತಹ ಸ್ಟ್ರಾಂಗ್  ಸಿನಿಮಾ ಮಾಡಬೇಕು ಎಂಬುವುದು ನರೇಶ್ ಅವರ ಉದ್ದೇಶವಾಗಿತ್ತು. ‘ಮತ್ತೆ ಮದುವೆ’ ಕಥೆಯನ್ನು ಎಂ ಎಸ್ ರಾಜು ಅವರು ತಂದಾಗ ಕನ್ನಡದಲ್ಲಿಯೂ ಮಾಡಬೇಕು ಎಂದು ತೀರ್ಮಾನ ಮಾಡಿದೆವು. ತೆಲುಗು ಕನ್ನಡ ಎರಡು ಭಾಷೆಯಲ್ಲಿಯೂ ಒಟ್ಟಿಗೆ ಪ್ರಚಾರ ಮಾಡಲು ಕಷ್ಟವಾಗುತ್ತದೆ ಎಂದು ಮೊದಲ ತೆಲುಗಿನಲ್ಲಿ ಸಿನಿಮಾ ರಿಲೀಸ್ ಮಾಡಿದೆವು. ಕನ್ನಡದಲ್ಲಿ ಈಗ ಸಿನಿಮಾ ರಿಲೀಸ್ ಆಗ್ತಿದೆ. ಒಳ್ಳೊಳ್ಳೆ ಸಾಂಗ್ಸ್ ಇದೆ ಒಳ್ಳೆ ಮೆಸೇಜ್ ಇದೆ” ಎಂದರು.  

      ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ಸೂಪರ್ ಸ್ಟಾರ್‌ ಕೃಷ್ಣ ಅವರ ಜೊತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಇದೀಗ ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ‘ಮತ್ತೆ ಮದುವೆ’ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ನಟಿಸಿದ್ದಾರೆ.‌

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top