ಎಂ.ಸಿ ವೇಣುಗೋಪಾಲ್ ಅವರ ನಗರದಲ್ಲಿನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ 

ಬೆಂಗಳೂರು:  ಗೃಹ ಸಚಿವ ಜಿ.ಪರಮೇಶ್ವರ್ ಅವರ ಆಪ್ತ  ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ನಗರದಲ್ಲಿನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳ ತಂಡ ದಾಳಿ  ನಡೆಸಿದೆ.

ಜೆ.ಪಿನಗರದಲ್ಲಿರುವ ವೇಣುಗೋಪಾಲ್  ಅವರ ಮನೆ ಮೇಲೆ ೧೫ಮಂದಿ  ಅಧಿಕಾರಿಗಳನ್ನೊಳಗೊಂಡ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ಕೈಗೊಂಡಿದೆ.

ಐಟಿ ಇಲಾಖೆಯ ಅಧಿಕಾರಿಗಳ ತಂಡವು ಮೂರು ಇನ್ನೋವಾ ಕಾರಿನಲ್ಲಿ ಆಗಮಿಸಿ ಅಧಿಕಾರಿಗಳು ಬೆಳಗ್ಗೆ ೬ ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

 

ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಧಿಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top