ಮುನಿರಾಬಾದ ನಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಂಸ್ಥೆ ಆಯೋಜಿಸಿದ್ದ 119ನೇ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಕೆಳಭಾಗದ ರಾಯಚೂರು ಜಿಲ್ಲೆಯ ತಾಲೂಕುಗಳಾದ ಸಿರವಾರ, ಮಾನ್ವಿ, ರಾಯಚೂರು ತಾಲೂಕಿನ ಜಮೀನುಗಳಿಗೆ ಅನುಗುಣವಾಗಿ ಮೈಲ್ 47, 69, 104 ರಲ್ಲಿ ನೀರಿನ ಪ್ರಮಾಣವನ್ನು ಕಾಯ್ದಿರಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ರಾಯಚೂರು ಜಿಲ್ಲೆಯ ಕೆಳಭಾಗಕ್ಕೆ ಸಮರ್ಪಕ ನೀರು, ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಲ್ಲಿ ನೀರು ಸರಬರಾಜು ಸೇರಿದಂತೆ, ನೀರಾವರಿಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಚಿವರುಗಳಾದ ಡಾ. ಶರಣ ಪ್ರಕಾಶ್ ಪಾಟೀಲ್ ಮತ್ತು ಶಿವರಾಜ್ ತಂಗಡಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Facebook
Twitter
LinkedIn
WhatsApp
Telegram
Email
Tumblr