ಬಳ್ಳಾರಿ : ವೈ.ಎಂ. ಸತೀಶ್ ಫೌಂಡೇಶನ್, ವೀರಶೈವ ವಿದ್ಯಾವರ್ಧಕ ಸಂಘ, ಇನ್ಫೋಸಿಸ್ ಫೌಂಡೇಶನ್ ಮತ್ತು ನಿರ್ಮಾಣ್ ಸಂಸ್ಥೆಗಳು ಜಂಟಿಯಾಗಿ ಬಳ್ಳಾರಿಯ ವೀರಶೈವ ಕಾಲೇಜಿನಲ್ಲಿ ನವೆಂಬರ್ 25ರ ಮಂಗಳವಾರ ಮೆಗಾ ಜಾಬ್ ಮೇಳವನ್ನು ಏರ್ಪಡಿಸಿವೆ.
ವೈ.ಎಂ. ಸತೀಶ್ ಫೌಂಡೇಶನ್ ಸಂಸ್ಥಾಪಕ ಟ್ರಸ್ಟಿ ಆಗಿರುವ ವಿಧಾನಪರಿಷತ್ ಸದಸ್ಯರಾದ ವೈ.ಎಂ. ಸತೀಶ್ ಅವರು ಪತ್ರಿಕಾ ಹೇಳಿಕೆ ನೀಡಿದ್ದು, ನವೆಂಬರ್ 25ರ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನೇರ ವಾಕಿನ್ ಸಂದರ್ಶನಗಳು ನಡೆಯಲಿವೆ. ಆಸಕ್ತರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದ್ದಾರೆ.
ಮೆಗಾ ಜಾಬ್ ಮೇಳದಲ್ಲಿ ಐಟಿಐ, ಡಿಪೆÇ್ಲಮಾ, ಬಿಎಸ್ಸಿ, ಡಿ ಫಾರ್ಮಾ, ಯಾವುದೇ ಪದವಿ ಮತ್ತು ಸ್ನಾತ್ತಕೋತ್ತರ ಪದವಿ, ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿದವರು ಜಾಬ್ ಮೇಳದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶಗಳಿವೆ. ಪ್ರವೇಶ ಉಚಿತವಾಗಿದೆ ಎಂದು ತಿಳಿಸಿದ್ದಾರೆ.
ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಬಯೋಡಾಟದ 10 ಪ್ರತಿಗಳನ್ನು, ಭಾವಚಿತ್ರಗಳನ್ನು, ಆಧಾರ್ ಕಾರ್ಡ್, ಮತ್ತು ಅಂಕಪಟ್ಟಿ, ವಿದ್ಯಾರ್ಹತೆಯ ನಕಲು ಪ್ರತಿಗಳನ್ನು ತರಬೇಕು. ಬಳ್ಳಾರಿ, ಬೆಂಗಳೂರು ಮತ್ತು ಹೈದರಾಬಾದ್‍ನಲ್ಲಿ ಉದ್ಯೋಗ ಮಾಡಲು ಆಸಕ್ತರಾಗಿರಬೇಕು.
ವಿವರಗಳಿಗಾಗಿ : ಮೊಬೈಲ್ ಸಂಖ್ಯೆ : 9886367517, 7090953830, 9154955835 ಗೆ ಸಂಪರ್ಕ ಮಾಡಿರಿ.
ಬಳ್ಳಾರಿಯಲ್ಲಿ ನವೆಂಬರ್ 25 ರಂದು ಮೆಗಾ ಜಾಬ್ ಮೇಳ



