ಶ್ಯಾಬನೂರು ಆಂಜನೇಯಸ್ವಾಮಿ ದೇವಾಲಯಕ್ಕೆ ಸಚಿವ ಬಿ.ನಾಗೇಂದ್ರ ಭೇಟಿ

ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯಲ್ಲಿ ಶ್ರೀವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮಿಜೀಯವರ ದಿವ್ಯ ಸಾನಿದ್ಯದಲ್ಲಿ ಸಮುದಾಯದ ನೂತನ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭಕ್ಕೆ ತೆರಳುವ ಮುನ್ನ  ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ನಾಗೇಂದ್ರ ಅವರು ಇಂದು ಶ್ಯಾಬನೂರು ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ‌ ಪಡೆದರು. 

ಈ ಸಂದರ್ಭದಲ್ಲಿ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ನಂತರ ರಾಜನಹಳ್ಳಿ ಶ್ರೀಮಠಕ್ಕೆ ತೆರಳಿ ಲಿಂಗೈಕ್ಯ ಜಗದ್ಗುರು ಪುಣ್ಯಾನಂದಪುರಿ ಶ್ರೀಗಳ ಗದ್ದುಗೆಯ ದರ್ಶನ ಪಡೆದು ಶ್ರೀಮಠದ ಅವರಣದಲ್ಲಿ ಅಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Facebook
Twitter
LinkedIn
WhatsApp

Leave a Comment

Your email address will not be published. Required fields are marked *

Translate »
Scroll to Top