ಬಳ್ಳಾರಿ: ಬಳ್ಳಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬುಡಾ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಸಭೆ ನಡೆಸಿದರು. ಬಳ್ಳಾರಿ ನಗರದ ಅಭಿವೃದ್ಧಿ ಮತ್ತು ಸೌಂದರೀಕರಣಕ್ಕೆ ಸಂಬಂಧಿಸಿದಂತೆಯೂ ರಿಯಲ್ ಎಸ್ಟೇಟ್ ಮಾಲೀಕರೊಂದಿಗೆ ಚರ್ಚಿಸಿದರು ಮತ್ತು ಅವರ ಸಮಸ್ಯೆಗಳನ್ನು ಆಲಿಸಿದರು.

ರಿಯಲ್ ಎಸ್ಟೇಟ್ ಮಾಲೀಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ನಿಯಾಮನುಸಾರ ಕ್ಷಿಪ್ರಗತಿಯಲ್ಲಿ ಕ್ರಮವಹಿಸುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಬುಡಾ ಅಧ್ಯಕ್ಷ ಪಿ.ಪಾಲನ್ನ, ಬುಡಾದ ನಾಮನಿರ್ದೇಶಿತ ಸದಸ್ಯರು,ಜಿಲ್ಲಾಧಿಕಾರಿಗಳಾದ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್,ಮಹಾನಗರ ಪಾಲಿಕೆ ಸದಸ್ಯರು, ಬುಡಾ ಆಯುಕ್ತರು, ಖಾಸಗಿ ಡೆವಲಪರ್ಸ್ ಗಳು ಇದ್ದರು.

