ವಿವಿಧ ಅಧಿಕಾರಿಗಳೊಂದಿಗೆ ಸಚಿವ ಭೈರತಿ ಸುರೇಶ್ ಸಭೆ

ಕಲ್ಬುರ್ಗಿ: ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ನಗರ ಯೋಜನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಮಹಾನಗರ ಪಾಲಿಕೆ ಆಯುಕ್ತರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್‌ ನಾಗಭೂಷಣ ಎಂ.ಎನ್, ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರಾದ ಎನ್. ಮಂಜುಶ್ರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ‌ವ್ಯವಸ್ಥಾಪಕ ನಿರ್ದೇಶಕರಾದ ದೀಪ ಚೋಳನ್, ಕಲಬುರಗಿ ಜಿಲ್ಲಾಧಿಕಾರಿ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top