ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿದ್ದ ಮಲ್ಲವ್ವ ಮೇಟಿ ಕಾರ್ಯವನ್ನು ಶ್ಲಾಘಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಗ್ರಂಥಾಲಯಕ್ಕೆ ಕುವೆಂಪು ಅವರ ಕಾನೂರು ಹೆಗ್ಗಡತಿ ಪುಸ್ತಕ ಉಡುಗೊರೆ ನೀಡಿದ ಸಚಿವರು

ಬೆಳಗಾವಿ : ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.ಮಲ್ಲವ್ವ ಮೇಟಿ ಅವರ ಕಾರ್ಯ ಇಡೀ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ಮಾದರಿಯಾಗಿದೆ. ಮಲ್ಲವ್ವ ಮೇಟಿ ಕಾರ್ಯನೋಡಿದರೆ ಸಾವಿತ್ರಿಬಾಯಿ ಪುಲೆ ಬಳಿಕ ಆಧುನಿಕ ಅಕ್ಷರದ ಅವ್ವ ಎನ್ನಬಹುದು. ಅವರ ಕಾರ್ಯಕ್ಕೆ ಅಭಿನಂದನೆಗಳು ಎಂದರ.

ಗ್ರಂಥಾಲಯಕ್ಕೆ ‘ಗೃಹಲಕ್ಷ್ಮಿ’ ಹೆಸರಿಡಲು ಮನವಿ ಮಲ್ಲವ್ವ ಮೇಟಿ ನಿರ್ಮಿಸಿರುವ ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಹೆಸರಿಡಲು ಸಚಿವರು ಮನವಿ ಮಾಡಿದರು. ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದ್ದು, ಈ ಯೋಜನೆಯ ಹೆಸರು ಅಜರಾಮರವಾಗಿರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರು ಕೂಡ ಈ ಯೋಜನೆಯ ಮೂಲಕ ಶಾಶ್ವತವಾಗಿ ಉಳಿಯಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗ್ರಂಥಾಲಯಕ್ಕೆ ‘ಕಾನೂರು ಹೆಗ್ಗಡತಿ’ ಪುಸ್ತಕ ಉಡುಗೊರೆ ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಕಾನೂರು ಹೆಗ್ಗಡತಿ ಪುಸ್ತಕವನ್ನು ಸಚಿವರು ಗ್ರಂಥಾಲಯಕ್ಕೆ ಉಡುಗೊರೆ ನೀಡಿದರು. ಈ ಗ್ರಂಥಾಲಯ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ ಎಂದು ಸಚಿವರು ಹಾರೈಸಿದರು.

Facebook
Twitter
LinkedIn
WhatsApp
Telegram
Email
Print

Leave a Comment

Your email address will not be published. Required fields are marked *

Translate »
Scroll to Top