ಬಳ್ಳಾರಿ: ಗಣರಾಜ್ಯೋತ್ಸವದ ಅಂಗವಾಗಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನಗರದ ಎಚ್.ಆರ್.ಗವಿಯಪ್ಪ ವೃತ್ತದಲ್ಲಿರುವ 150 ಅಡಿ ಎತ್ತರದ ಸ್ಥಂಭದ ಬೃಹತ್‍ಧ್ವಜಾರೋಹಣವನ್ನು ಬುಧವಾರ ನೆರವೇರಿಸಿದರು.


ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ,, ಬುಡಾ ಅಧ್ಯಕ್ಷ ಪಾಲನ್ನ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ,ಜಿಪಂ ಸಿಇಒ ಕೆ.ಆರ್.ನಂದಿನಿ,ಎಸ್ಪಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಸಹಾಯಕ ಆಯುಕ್ತ ಡಾ.ಆಕಾಶ ಶಂಕರ್ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.