ಕೊಬ್ಬರಿ ಶೆಡ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಗುಬ್ಬಿ : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಬ್ಬರಿ ಶೆಡ್ಡು, ಟ್ರ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದರಿಂದ ಸುಟ್ಟು ಕರಕಲಾದ  ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ರಾಂಪುರದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

 

ರೈತ ಮಹಿಳೆ ಶಿವಗಂಗಮ್ಮನವರು ಕುಟುಂಬ ಸಮೇತ ತೋಟದಲ್ಲಿ ವಾಸವಿದ್ದು, ಮನೆಯ ಸಮೀಪದಲ್ಲಿಯೇ ಕಾಯಿ ತುಂಬಲು ಶೆಡ್ಡು ನಿರ್ಮಿಸಿಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದು ಅಷ್ಟರೊಳಗೆ ಭಾಗಶಃ ಸುಟ್ಟು ಹೋಗಿದೆ.

ಶೆಡ್ಡು ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಶೆಡ್ಡಿನಲ್ಲಿದ್ದ ಸುಮಾರು ೩೦ಸಾವಿರ ಕೊಬ್ಬರಿ, ಟ್ರ್ಯಾಕ್ಟರ್, ಬೈಕು ಹಾಗೂ ಕೃಷಿ ಪರಿಕರಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾಗಿದೆ.

ಕೊಳವೆಬಾವಿ ಕೊರೆಸಲು  ಇಟ್ಟುಕೊಂಡಿದ್ದ ಕೊಬ್ಬರಿಯು ಸುಟ್ಟು ಹೋಗಿದ್ದು, ಕುಟುಂಬ ಸಂಕಷ್ಟವನ್ನು ಎದುರಿಸುವಂತೆ ಆಗಿದೆ. ಬರದ ನಡುವೆ ಬದುಕನ್ನು ಕಟ್ಟಿಕೊಳ್ಳಲು ಪರದಾಡುತ್ತಿದ್ದ ನಮಗೆ ಈ ಅವಘಡ ತುಂಬ ಸಂಕಷ್ಟವನ್ನು ತಂದೊಡ್ಡಿದೆ. ಸರ್ಕಾರ ಸಾಧ್ಯವಿರುವಷ್ಟು ಪರಿಹಾರ ಒದಗಿಸಿದಲ್ಲಿ ಮತ್ತೆ ಬದುಕು ಕಟ್ಟಿಕೊಳ್ಳಬಹುದು. ಇಲ್ಲವಾದಲ್ಲಿ ಏನು ಮಾಡುವುದು ತೋಚುತ್ತಿಲ್ಲ ಎಂದು ರೈತ ಮಹಿಳೆ ಶಿವಗಂಗಮ್ಮ ಅಳಲು ತೋಡಿಕೊಂಡರು.

Section Title

ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೆಂಟರ್ ಗೆ ಭೇಟಿ ನೀಡಿದ ಸಚಿವ ಪರಮೇಶ್ವರ್

ಬೆಂಗಳೂರು : ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು...

ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಯಶಸ್ಸು ದೊರೆಯಲಿದೆ

ಬೆಂಗಳೂರು: ಯಾವುದೇ ವಲಯದ ವೃತ್ತಿ ಬದುಕಿನಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ, ಜ್ಞಾನದ ಮಟ್ಟವನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಂಡಲ್ಲಿ ಮಾತ್ರ ಯಶಸ್ಸು ಸದಾ ನಮ್ಮ ಜೊತೆ ಇರುತ್ತದೆ ಎಂದು ಹ್ಯಾಪಿಯಸ್ಟ್ ಮೈಂಡ್ಸ್...

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ

ಬೆಂಗಳೂರು: ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ...

ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ”...

ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು : ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದ ದಲ್ಲಿ ಇಂದು ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ...

ಸಿಎಂ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷವು ವಾಲ್ಮೀಕಿ ನಿಗಮದ ಹಣವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರ ಎಸಗಿರುವುದು ಹಾಗೂ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ (ಮುಡಾ) ಖಾಲಿ ನಿವೇಶನಗಳನ್ನು ಕಾನೂನಾತ್ಮಕವಾಗಿ ಹರಾಜು...

ಬಿಜೆಪಿ, ಜೆಡಿಎಸ್ ನವರ ಸುಳ್ಳುಗಳಿಗೆ ಅಧಿಕೃತ ದಾಖಲೆಗಳ ಮೂಲಕ ಪ್ರತ್ಯುತ್ತರ ನೀಡಿದ ಸಿಎಂ ಸಿದ್ದರಾಮಯ್ಯ

ಯಾವುದೇ ಅಧಿಕೃತ ದಾಖಲೆಗಳಿಲ್ಲದೆ-ಅರೆ ಬರೆ ಪತ್ರಗಳನ್ನು ತೋರಿಸಿ ರಾಜ್ಯದ ಜನರ ಮುಂದೆ ಬಿಜೆಪಿ+ಜೆಡಿಎಸ್ ನಡೆಸಿದ ಜಂಟಿ ಡ್ರಾಮಾಗಳಿಗೆ ಅಧಿಕೃತ ದಾಖಲೆಗಳನ್ನು ಮುಂದಿಟ್ಟು ಕಿವಿ ಹಿಂಡಿದ ಸಿಎಂ...

ಹೇಡಿಯಂತೆ ಪಲಾಯನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ...
Facebook
Twitter
LinkedIn
Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top