ಬಳ್ಳಾರಿ: ತಾಲ್ಲೂಕಿನ ಮೋಕಾದ ಹಗರಿ ಬ್ರಿಡ್ಜ್ ಹತ್ತಿರ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.O ಅಭಿಯಾನದ ಬಗೆಗಿನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

11ನೇ ಸೆಪ್ಟೆಂಬರ್ ರಿಂದ 16 ಸೆಪ್ಟೆಂಬರ್ ವರೆಗೆ ನಡೆಯುವ ಇಂದ್ರ ಧನುಷ್ 5.0 ಕಾರ್ಯಕ್ರಮ ನಡೆಯಲಿದ್ದು, ಈ ಬಗ್ಗೆ ತಾಯಂದಿರಿಗೆ ಮಾಹಿತಿ ನೀಡಿದ ಮೋಕಾ ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಖುರ್ಶಿದ್ ಬೇಗಮ್ ಇವರು ತಾಯಂದಿರಿಗೆ ಮಿಷನ್ ಇಂದ್ರಧನುಷ್ ಕಾರ್ಯಕ್ರಮದ ಉದ್ದೇಶ ತಪ್ಪಿಹೋದ, ಲಸಿಕೆಯಿಂದ ವಂಚಿತರಾದ, ಬಿಟ್ಟು ಹೋದಾ 0-5 ವಯಸ್ಸಿನ ಮಕ್ಕಳು, ಗರ್ಭಿಣಿಯರು ಹಾಗು ಬಾಕಿ ಇರುವ ಲಸಿಕೆಗಳನ್ನು ನೀಡಲಾಗುತ್ತದೆ ಎಂದರು.

ಸಮಯಕ್ಕೆ ಸರಿಯಾಗಿ ಮಕ್ಕಳಿಗೆ ಲಸಿಕೆ ಕೊಡಿಸಿ ಹಾಗು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಎಂದು ತಾಯಂದಿರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ಗುರುಸಿದ್ದಪ್ಪ, ಮೊಹಮ್ಮದ್ ಇಶಾಕ್ ಮತ್ತು ಆಶಾ ಕಾರ್ಯಕರ್ತೆಯರಾದ ಮಲ್ಲಮ್ಮ, ನಾಗವೇಣಿ ಮತ್ತು ಹೇಮಾವತಿ ಮತ್ತಿತರರು ಉಪಸ್ಥಿತರಿದ್ದರು.