ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹಿಟ್ನಾಳ ಭೇಟಿ, ಪರಿಹಾರದ ಭರವಸೆ

ಕೊಪ್ಪಳ,: ಈ ವರ್ಷ ಕೊಪ್ಪಳದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅಪಾರ ಹಾನಿಯೂ ಸಂಭವಿಸಿದೆ. ಶಾಸಕರು, ಅಧಿಕಾರಿಗಳು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೊತೆಗೆ ಪರಿಹಾರ ಒದಗಿಸುವ ಭರವಸೆ ಕೊಟ್ಟರು. ಕೊಪ್ಪಳ ತಾಲೂಕಿನ ಹಿರೇಹಳ್ಳ ಜಲಾಶಯ ಒಂದೇ ದಿನದಲ್ಲಿ ಭರ್ತಿಯಾಗಿದ್ದು ಶುಕ್ರವಾರ ನಾಲ್ಕು ಗೇಟುಗಳ ಮೂಲಕ ಅಪಾರ ಪ್ರಮಾಣದ ನೀರು ಹೊರಬಿಡಲಾಗಿದೆ. ಹಿರೇಹಳ್ಳದುದ್ದಕ್ಕೂ ಅಲ್ಲಲ್ಲಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ತುಂಬಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

ಎರಡು ದಂಡೆಯಲ್ಲಿರುವ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿಹೋಗಿದೆ. ಮಳೆ ಹೆಚ್ಚಾದ ಸ್ಥಳಕ್ಕೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿ, ಅಕಾಲಿಕವಾಗಿ ಸುರಿದ ಮಳೆಯಿಂದ ಬಾರಿ ನಷ್ಟ ಆಗಿದೆ. ರೈತರು ಕಂಗಲಾಗಿದ್ದಾರೆ. ಈಗಾಗಲೇ ಎಲ್ಲಾ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಹಾನಿಗೊಳಗಾದ ಪ್ರದೇಶವನ್ನ ಸರ್ವೇ ಮಾಡಿ ಅತೀ ಶೀಘ್ರದಲ್ಲಿ ವರದಿ ಸಲ್ಲಿಸಿ ಹಾನಿಗೊಳಗಾದ ರೈತರಿಗೆ ಪರಿಹಾರವನ್ನು ಮಂಜೂರು ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

Leave a Comment

Your email address will not be published. Required fields are marked *

Translate »
Scroll to Top