ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚು ಒತ್ತು‌ ನೀಡಲಾಗುವುದು: ಸಚಿವ ಎನ್.ನಾಗರಾಜ್

ದೇವನಹಳ್ಳಿ:ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಒಡೆತ ಬಿದ್ದಿದದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತನ್ನು ನೀಡಲಾಗುವುದು ಎಂದು ಪೌರಾಡಳಿ, ಸಣ್ಣ ಕೈಗಾರಿಕೆಗಳ‌ ಹಾಗೂ ಸಾರ್ವಜನಿಕ ವಲಯ ಉದ್ದಿಮೆಗಳ ಸಚಿವರಾದ ಎನ್ ನಾಗರಾಜ್ ತಿಳಿಸಿದರು.ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ೬೬ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸಿ,ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ನಂತರ ಮಾತನಾಡಿದರು.
ಪಿ.ಎಂ‌ ಕೇರ್ ಅನುದಾನಡಿ ಪ್ರತಿ ತಾಲ್ಲೂಕಿನಲ್ಲಿ ವೈದ್ಯಕೀಯ ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ ಹಾಗೂ ಕೋವಿಡ್ ಮಹಾ ಮಾರಿಯ ವಿರುದ್ದ ಹೋರಾಡಲು ಸರ್ಕಾರ ಲಸಿಕಾ ಅಭಿಯಾನಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲು ಯಶಸ್ವಿಯಾಗಿದೆ, ಕುವೆಂಪು, ದಾರಾ ಬೇಂದ್ರೆ, ಮಾಸ್ತಿ ವೆಂಕಟೇಶ್ ಐಯ್ಯಂಗಾರ್, ಶಿವರಾಮ ಕಾರಂತ, ಯು.ಆರ್ ಅನಂತ ಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ, ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿಯನ್ನು ತಂದು ಕೊಡುವುದರ ಜೊತೆಗೆ ಅನೇಕ ಮಹಾನ್ ನಾಯಕರು ಕನ್ನಡ ಭಾಷೆ, ಸಂಸ್ಕೃತಿ‌‌ ನೆಲ‌,‌ಜಲ ಉಳಿವು ಮತ್ತು ಬೆಳೆಸಿಕೊಂಡು ಹೋಗಲು ಶ್ರಮಿಸಿದ್ದಾರೆ‌ ಎಂದು ನೆನಪಿಸಿಕೊಂಡರು.

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣ ಸ್ವಾಮಿ ಮಾತಾನಾಡಿ ಕನ್ನಡ ಭಾಷೆ ಮಾತಾನಾಡುವ ಪ್ರಾತ್ಯಗಳನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯ ರಚನೆಯಾಯಿತು. ಅನ್ಯ ಭಾಷಿಗರನ್ನು ದೂಷಿಸುವ ಬದಲಾಗಿ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಿ ಕೊಂಡು ಹೋಗಲು ನಾವೆಲ್ಲರೂ ಮನನ ಮಾಡಿಕೊಳ್ಳಬೇಕು ಎಂದು ಹೇಳಿದರು.ಪೊಲೀಸ್ ಇಲಾಖೆಯ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಎನ್. ನಾಗರಾಜ್ (ಎಂ.ಟಿ.ಬಿ) ಅವರು ಪರೇಡ್ ವೀಕ್ಷಿಸಿ, ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.ಇದೇ ವೇಳೆ ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವರದಾನವಾಗಲು, ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 17 ಹೋಬಳಿಗಳ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಸಾಮರ್ಥ್ಯ ಹೆಚ್ಚಿಸಲು ಅಳವಡಿಸಲಾದ ಸ್ಮಾರ್ಟ್ ಪ್ಯಾನಲ್ ಟಿ.ವಿ. , ಬೋಧನೆ ಪ್ರಾಯೋಗಿಕ ಕಾರ್ಯಕ್ರಮದ ವಿಡಿಯೋ ಸಂವಾದದ ತರಗತಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ 1 ರಿಂದ 10 ನೇ ತರಗತಿಯವರೆಗೆ ವ್ಯಾಸಾಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಶಸ್ತಿ ವಿತರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಹ ನೀಡಿ ಗೌರವಿಸಲಾಯಿತು.


ಜನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ, ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ, ಅಂಗವಿಕಲರಿಗೆ ದ್ವಿ ಚಕ್ರ ವಾಹನ ವಿತರಿಸಲಾಯಿತು ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ, ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಬಾಲ ವ್ಯವಸ್ಥೆ ಹಾಗೂ ಕಿಶೋರಾವ್ಯಸ್ಥೆಯ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕುರಿತು ಜನ ಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ‌ಕೆ.‌ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ ಆರ್. ರವಿಕುಮಾರ್, ಜಿಲ್ಲಾ ವರಿಷ್ಠಾಧಿಕಾರಿ ಡಾ.ಕೋನ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ವಿಜಯ ಈ. ರವಿಕುಮಾರ, ದೇವನಹಳ್ಳಿ ಪುರಸಭೆ ಅಧ್ಯಕ್ಷೆ ರೇಖಾ ವೇಣು ಗೋಪಾಲ್, ಪುರಸಭೆ ಉಪಾಧ್ಯಕ್ಷೆ ಪುಷ್ಪ, ದೇವನಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಅನಿಲ್ ಕುಮಾರ್, ದೇವನಹಳ್ಳಿ ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನಾಗೇಶ್, ಸದಸ್ಯರುಗಳು,ಕನ್ನಡ ‌ಪರ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು ಹಾಗೂ ಮುಖಂಡರು, ಸಾರ್ವಜನಿಕರು, ವಿಧ್ಯಾರ್ಥಿಗಳು ಭಾಗವಹಿಸಿದರು.

Leave a Comment

Your email address will not be published. Required fields are marked *

Translate »
Scroll to Top