ಮುಂದಿನ ದಿನಗಳಲ್ಲಿ ಇನ್ನಷ್ಟು ಮುಖಂಡರು ಬಿಜೆಪಿಗೆ ಸೇರ್ಪಡೆ- ಬಿ.ವೈ.ವಿಜಯೇಂದ್ರ

ಬೆಂಗಳೂರು: ನರೇಂದ್ರ ಮೋದಿಜೀ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಬೇಕೆಂಬ ನಿಟ್ಟಿನಲ್ಲಿ ಬಿಜೆಪಿ ಪರವಾಗಿ ಒಂದು ಅಭೂತಪೂರ್ವ ವಾತಾವರಣ ದೇಶ ಮತ್ತು ರಾಜ್ಯದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

 

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವು ಮುಖಂಡರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದ್ದು ಬಿಜೆಪಿ ಶಕ್ತಿ ವೃದ್ಧಿಗೆ ಕಾರಣವಾಗಿದೆ ಎಂದರು. ಕಲಬುರ್ಗಿಯ ಹಿರಿಯ ಧುರೀಣ, ಮಾಜಿ ಸಚಿವ ಬಾಬುರಾವ್ ಚೌಹಾಣ್, ಬೈಲಹೊಂಗಲದ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್, ಜಗಳೂರಿನ ಮಾಜಿ ಶಾಸಕ ಹೆಚ್.ಪಿ. ರಾಜೇಶ್, ಶಿಗ್ಗಾಂವಿಯ ಮುಖಂಡ ಶಶಿಧರ್ ಯಲಿಗಾರ್ ಅವರು ಬಿಜೆಪಿ ಸೇರಿದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ ಎಂದು ವಿಜಯೇಂದ್ರ ಅವರು ತಿಳಿಸಿದರು. ಪಕ್ಷ ಸೇರಿದವರನ್ನು ಗೌರವದಿಂದ ನೋಡುತ್ತೇವೆ. ಪಕ್ಷದ ಬಲವರ್ಧನೆಗೆ ಅವರ ಸೇವೆಯನ್ನು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

 

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಂಸದ ಜಿ.ಎಂ. ಸಿದ್ದೇಶ್ವರ್, ವಿಧಾನಪರಿಷತ್ ಮುಖ್ಯಸಚೇತಕ ಎನ್.ರವಿಕುಮಾರ್ ಮತ್ತು ಶಾಸಕ ಶೈಲೇಂದ್ರ ಬೆಲ್ದಾಳೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Email
Print
Telegram

Leave a Comment

Your email address will not be published. Required fields are marked *

Translate »
Scroll to Top