3 ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ

3 ವಂದೇ ಭಾರತ್ ಎಕ್ಸ್'ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ

Kannada Nadu
3 ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯವರು ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್’ಗೆ ಆಗಮಿಸಿದರು.
Karnataka: PM Modi flags off 3 Vande Bharat trains in Bengaluru, new metro  line next - Bangalore News | India Today
ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಪ್ರಧಾನಿ ಮೋದಿ

ಬೆಂಗಳೂರು: ಬೆಂಗಳೂರಿಗೆ ಬಂದಿಳಿದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಭಾನುವಾರ ಚಾಲನೆ ನೀಡಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿಯವರು ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್’ಗೆ ಆಗಮಿಸಿದರು.

PM Modi flags off 10 new Vande Bharat trains, says 10 years of work is  'just a trailer' - BusinessToday

ಅಲ್ಲಿಂದ ರಸ್ತೆ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿ, ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.

ನಂತರ ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆ ನಡುವಿನ ಇನ್ನೂ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿದರು

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";