ಕೊಪ್ಪಳ: ತುಂಗಭದ್ರಾ ಜಲಾಶಯದ ಎಲ್ಲ ಗೇಟ್‌ಗಳನ್ನು ಬದಲಾವಣೆ ಮಾಡಲು ಈಗಾಗಲೇ ತಾಂತ್ರಿಕ ತಂಡ ರಚಿಸಲಾಗಿದೆ. ತುಂಗಭದ್ರಾ ಆಣೆಕಟ್ಟಿನ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಕೊಪ್ಪಳ ತಾಲೂಕಿನ ಮುನಿರಾಬಾದ್ ಹೈಸ್ಕೂಲ್ ಆವರಣದಲ್ಲಿ ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಸೆ.22ರಂದು ಹಮ್ಮಿಕೊಂಡಿದ್ದ, ತುಂಗಭದ್ರಾ ಆಣೆಕಟ್ಟಿನ ಗೇಟ್‌ನ್ನು ವಾರದೊಳಗೆ ನಿರ್ಮಿಸಿ, ಅಳವಡಿಸಿದ ಅಧಿಕಾರಿಗಳು, ತಂತ್ರಜ್ಞರು, ಸಿಬ್ಬಂದಿಗಳು ಹಾಗೂ ಗೇಟ್ ನಿರ್ಮಾಣ ಸಂಸ್ಥೆಯ ಪ್ರತಿನಿಧಿಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತುಂಗಭದ್ರಾ ಜಲಾಶಯಕ್ಕೆ ಪರ್ಯಾಯವಾಗಿ ಸಮನಾಂತರ ಜಲಾಶಯ ನಿರ್ಮಾಣ ಅತ್ಯವಶ್ಯವಾಗಿದ್ದು, ನವಲಿ ಸಮನಾಂತರ ಜಲಾಶಯಕ್ಕಾಗಿ ಸುಮಾರು 15 ಸಾವಿರ ಎಕರೆ ಜಮೀನು ಬೇಕಾಗುತ್ತದೆ. ಇದಕ್ಕಾಗಿ ರೈತರು ಸಹಕರಿಸಬೇಕು ಎಂದರು.
ಗAಗಾ ಸ್ನಾನಂ ತುಂಗಾ ಪಾನಂ ಎಂಬ ಮಾತಿನಂತೆ ತುಂಗಾ ನದಿಯ ನೀರು ಪವಿತ್ರವಾಗಿದೆ. ಆಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳಾಗಿವೆ ಎಂದು ಜವಾಹರಲಾಲ್ ನೆಹರು ರವರು ತಿಳಿಸಿದ್ದಾರೆ. ಈ ಭಾಗದ ರೈತರ ಜೀವ ಜಲ ತುಂಗಭದ್ರಾ ಆಣೆಕಟ್ಟಿನ ಕ್ರೆಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆದಾಗ ರೈತರು ಆತಂಕದಲ್ಲಿದ್ದರು. ಸರ್ಕಾರ ರೈತರ ಬೆನ್ನಿಗೆ ನಿಂತು ಸ್ಟಾಪ್ ಗೇಟ್ ಅಳವಡಿಸಿ, ನೀರನ್ನು ಸಂರಕ್ಷಿಸಿದ್ದೇವೆ. ಸ್ಟಾಪ್ಗೇಟ್ ಅಳವಡಿಕೆಗಾಗಿ ಅಧಿಕಾರಿಗಳು, ತಂತ್ರಜ್ಞರು, ಸಿಬ್ಬಂದಿ ಹಾಗೂ ಗೇಟ್ ನಿರ್ಮಾಣ ಸಂಸ್ಥೆಯ ಪ್ರತಿನಿಧಿಗಳು ಶ್ರಮಿಸಿದ್ದು, ಅವರೆಲ್ಲರ ಸಾಧನೆಗೆ ಸರ್ಕಾರ ಅಭಿನಂದಿಸುತ್ತಿದೆ ಎಂದು ಹೇಳಿದರು.
ರಾಜ್ಯದ ಕೆ.ಆರ್.ಎಸ್., ಆಲಮಟ್ಟಿ ಅಣೆಕಟ್ಟುಗಳಿಗೆ ಈಗಾಗಲೇ ಬಾಗಿನ ಅರ್ಪಣೆ ಮಾಡಿದ್ದೇವೆ. ಈಗ ತುಂಗಭದ್ರಾ ಜಲಾಶಯಕ್ಕೂ ಬಾಗಿನ ಅರ್ಪಿಸಲಾಗಿದೆ. ರೈತರ ಬೆಳೆಗಳ ರಕ್ಷಣೆಗೆ ಅವಶ್ಯವಿರುವ ನೀರನ್ನು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಮಾತನಾಡಿ, ಈ ಭಾಗಕ್ಕೆ ಸೆ.22 ಸಂಭ್ರಮದ ದಿನವಾಗಿದೆ. ಮುರಿದುಹೋದ ಕ್ರೆಸ್ಟ್ ಗೇಟ್ ದುರಸ್ತಿಗೆ ಸರ್ಕಾರವು ತ್ವರಿತವಾಗಿ ಕ್ರಮ ಕೈಗೊಂಡು ನೀರನ್ನು ಉಳಿಸುವಂತಹ ಕೆಲಸ ಮಾಡಿದೆ. ಇದಕ್ಕಾಗಿ
ಶ್ರಮಿಸಿದ ಅಧಿಕಾರಿಗಳು, ತಂತ್ರಜ್ಞರು, ಸಿಬ್ಬಂದಿಗಳು ಹಾಗೂ ಗೇಟ್ ನಿರ್ಮಾಣ ಸಂಸ್ಥೆಯ ಪ್ರತಿನಿಧಿಗಳಿಗೆ ಸನ್ಮಾನಿಸಿ ಅಭಿನಂದಿಸಲಾಗುತ್ತಿದೆ ಎಂದರು. ತುಂಗಭದ್ರಾ ಜಲಾಶಯವು ಈ ಭಾಗದ ರೈತರ ಜೀವನಾಡಿಯಾಗಿದ್ದು, ಆಣೆಕಟ್ಟಿನ ಎಲ್ಲಾ 33 ಕ್ರೆಸ್ಟ್ ಗೇಟ್ಗಳ ಬದಲಾವಣೆ ಆಗಬೇಕಿದೆ ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್-19ರ ಚೈನ್ ಲಿಂಕ್ ಕಟ್ಆಗಿ ನೀರು ಪೋಲಾಗುತ್ತಿತ್ತು. ಇದರಿಂದ ರೈತರು ಆತಂಕ ಪಡುತ್ತಿದ್ದರು. ಮುಖ್ಯ ಮಂತ್ರಿಗಳು, ಉಪ ಮುಖ್ಯ ಮಂತ್ರಿಗಳು, ಸಚಿವರು ರೈತರಿಗೆ ಧೈರ್ಯ ತುಂಬಿ ದುರಸ್ತಿ ಕಾರ್ಯವು ಶೀಘ್ರ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದರು. ಅದರಂತೆ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಯಿತು. ಇದರ ಫಲವಾಗಿ ಈಗ ಸುಮಾರು 102 ಟಿಎಂಸಿ ನೀರನ್ನು ರಕ್ಷಿಸಲಾಗಿದೆ ಎಂದರು.
ನಮ್ಮ ಸರ್ಕಾರವು ಬಡವರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಜಾರಿ ತಂದಿದೆ. ಅಳವಂಡಿ-ಬೆಟಗೇರಿ, ಸಿಂಗಟಾಲೂರು, ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆಗಳನ್ನು ಜಾರಿಗೆ ಮಾಡಬೇಕು. ಕೊಪ್ಪಳ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನೀಡಬೇಕು ಹಾಗೂ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ, ಕರ್ನಾಟಕ ರಾಜ್ಯ ಕೈಗಾರಿಕ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರ ಶಾಸಕರಾದ ಜೆ.ಎನ್.ಗಣೇಶ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರ ಶಾಸಕರಾದ ಆರ್.ಬಸನಗೌಡ ತುರುವಿಹಾಳ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಶಾಸಕರಾದ ಬಸನಗೌಡ ದದ್ದಲ್, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಂ, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ರಾಯಚೂರು ಸಂಸದರಾದ ಜಿ.ಕುಮಾರ್ ನಾಯಕ, ಕೂಡ್ಲಿಗಿ ಶಾಸಕರಾದ ಡಾ ಶ್ರೀನಿವಾಸ್ ಎನ್.ಟಿ., ಹೂವಿನಹಡಗಲಿ ಶಾಸಕರಾದ ಎಲ್.ಕೃಷ್ಣ ನಾಯಕ, ಹರಪ್ಪನಹಳ್ಳಿ ಶಾಸಕರಾದ ಎಂ.ಪಿ ಲತಾ ಮಲ್ಲಿಕಾರ್ಜುನ್, ವಿಧಾನ ಪರಿಷತ್ ಸದಸ್ಯರುಗಳಾದ ಬಸನಗೌಡ ಬಾದರ್ಲಿ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ಸಾಬ್ ನಬೀಬ್ ಸಾಬ್ ದೋಟಿಹಾಳ, ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್.ಎನ್.ಎಫ್ ಮಹಮದ್ ಇಮಾಮ್ ನಿಯಾಜಿ, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ್ ಎನ್., ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೊಹನ್ ರಾಜ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಎಂ.ಎಸ್.ದಿವಾಕರ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ ಮೋಹಮ್ಮದ್ ಅಲಿ ಅಕ್ರಮ್ ಷಾ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್. ಲೋಕೇಶ್ ಕುಮಾರ್, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ ರಾಮ್ ಎಲ್. ಅರಸಿದ್ದಿ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಬಿ.ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ ಅಮ್ಮನಬಾವಿ, ತುಂಗಭದ್ರಾ ಬೋರ್ಡ್ ಕಾರ್ಯದರ್ಶಿಗಳಾದ ಒ.ಆರ್.ಕೆ. ರೆಡ್ಡಿ, ಕ.ನೀ.ನಿ.ನಿ, ನೀ.ಕೇ.ವ. ಮುನಿರಾಬಾದ್ ಮುಖ್ಯ ಅಭಿಯಂತರರಾದ ಹನುಮಂತ ಜಿ ದಾಸರ, ಮುನಿರಾಬಾದ್ ತುಂಗಭದ್ರ ಯೋಜನ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್, ತುಂಗಭದ್ರಾ ಬೋರ್ಡ್ ಅಧೀಕ್ಷಕ ಅಭಿಯಂತರರಾದ ಶ್ರೀಕಾಂತ್ ರೆಡ್ಡಿ, ರಾಯಚೂರು ಜಿಲ್ಲೆಯ ಯರಮರಸ್ ಕ್ಯಾಂಪ್ ತುಂಗಭದ್ರ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಕೆ.ಬಿ.ಹೆಚ್ ಶಿವಶಂಕರ್, ಮುನಿರಾಬಾದ್ ಕ.ನೀ.ನಿ.ನಿ ನಂ.1 ತುಂಗಭದ್ರಾ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಗಿರೀಶ್ ಸಿ ಮೇಟಿ, ತುಂಗಭದ್ರಾ ಬೋರ್ಡ್ ಕಾರ್ಯಪಾಲಕ ಅಭಿಯಂತರರಾದ ಜಿ.ಟಿ. ರವಿಚಂದ್ರ, ಮುನಿರಾಬಾದ್ ಕ.ನೀ.ನಿ.ನಿ ಮುಖ್ಯ ಕಾಮಗಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧರ್ಮರಾಜ ಎಲ್ ಹಾಗೂ ಹಾಗೂ ಎಲ್ಲಾ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.