LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

 ಹಸ್ತಪ್ರತಿಗಳ ಸಂರಕ್ಷಣೆಗೆ 'ಜ್ಞಾನ ಭಾರತಂ ಮಿಷನ್' ಚಾಲನೆ

ಬಳ್ಳಾರಿ:ಶತಮಾನಗಳ ಇತಿಹಾಸವಿರುವ ಭಾರತದ ಜ್ಞಾನ ಪರಂಪರೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ 'ಜ್ಞಾನ ಭಾರತಂ ಮಿಷನ್' ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಯೋಜನೆಯಡಿ ಜಿಲ್ಲೆಯಾದ್ಯಂತ ಇರುವ ಪ್ರಾಚೀನ ಹಸ್ತಪ್ರತಿಗಳು, ಕೈಬರಹದ ಪಠ್ಯಗಳು ಮತ್ತು ಐತಿಹಾಸಿಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಶಾಶ್ವತವಾಗಿ ಸಂರಕ್ಷಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

*ಯೋಜನೆಯ ಉದ್ದೇಶ ಮತ್ತು ಕಾರ್ಯವೈಖರಿ:*

ದೇಶದ ಅಮೂಲ್ಯ ಜ್ಞಾನ ಸಂಪತ್ತನ್ನು ಒಂದೇ ವೇದಿಕೆಯಡಿ ತಂದು 'ರಾಷ್ಟ್ರೀಯ ಹಸ್ತಪ್ರತಿ ಭಂಡಾರ' ನಿರ್ಮಿಸುವುದು ಈ ಮಿಷನ್‌ನ ಮುಖ್ಯ ಉದ್ದೇಶ. ವಿಶೇಷ ಮೊಬೈಲ್ ಅಪ್ಲಿಕೇಶನ್ ಮೂಲಕ ಹಸ್ತಪ್ರತಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಇದರ ನೋಡೆಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಸಮೀಕ್ಷೆಯ ಕ್ಲಸ್ಟರ್ ಕೇಂದ್ರವಾಗಿದೆ ಎಂದು ಅವರು ತಿಳಿಸಿದ್ದಾರೆ.

*ಜಿಲ್ಲಾ ಮಟ್ಟದ ಸಮಿತಿ ರಚನೆ:*

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಜಿಲ್ಲೆಯ ಮಠಗಳು, ದೇವಾಲಯಗಳು, ಗ್ರಂಥಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಇರುವ ಹಸ್ತಪ್ರತಿಗಳನ್ನು ಪತ್ತೆಹಚ್ಚುವ ಜವಾಬ್ದಾರಿ ಹೊತ್ತಿದೆ. ಸಮೀಕ್ಷೆಯು ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿದ್ದು, ಹಸ್ತಪ್ರತಿಗಳ ಜಿಯೋಟ್ಯಾಗಿಂಗ್ ಮತ್ತು ಮೆಟಾಡೇಟಾ ದಾಖಲೀಕರಣ ಮಾಡಲಾಗುತ್ತಿದೆ.

*ಗಮನಾರ್ಹ ಪ್ರಗತಿ:*

ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವು ವೇಗವಾಗಿ ನಡೆಯುತ್ತಿದ್ದು, 17 ಜಿಲ್ಲೆಗಳಲ್ಲಿ ಏ.27 ರ ವರೆಗೆ ಒಟ್ಟು 2,13,255 ಹಸ್ತಪ್ರತಿಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಪ್ರಸ್ತುತ ಬಳ್ಳಾರಿ ಜಿಲ್ಲೆಯಲ್ಲಿಯೂ ಸಮೀಕ್ಷಾ ಕಾರ್ಯವು ಪ್ರಗತಿಯಲ್ಲಿದೆ. ಈ ಸಮೀಕ್ಷಾ ಪ್ರಕ್ರಿಯೆಯು ಮೇ ರವರೆಗೆ ಅಂತ್ಯದವರೆಗೆ ಮುಂದುವರಿಯಲಿದೆ.

*ಸಾರ್ವಜನಿಕರಿಗೆ ಮನವಿ:*

ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾರ ಬಳಿಯಾದರೂ ಪ್ರಾಚೀನ ಹಸ್ತಪ್ರತಿಗಳು ಅಥವಾ ಬರವಣಿಗೆಯುಳ್ಳ ತಾಳೆಗರಿಗಳು ಲಭ್ಯವಿದ್ದಲ್ಲಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ. ಮಾಹಿತಿ ನೀಡಲು ಇಚ್ಛಿಸುವವರು ಈ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಬಹುದು: ಡಾ. ಆರ್. ಮಂಜನಾಯ್ಕ್: ಪುರಾತತ್ವ ಸಹಾಯಕರು, ಕಮಲಾಪುರ (ಮೊ: 9945415518),  ಶ್ರೀಹರಿ ಮಾಸನೂರು: ಪ್ರವಾಸಿ ಅಧಿಕಾರಿಗಳು, ಕಮಲಾಪುರ (ಮೊ:7892722443).

ನಮ್ಮ ಪೂರ್ವಜರ ಜ್ಞಾನದ ಕುರುಹುಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ರಾಷ್ಟ್ರೀಯ ಕಾರ್ಯಕ್ಕೆ ಸಾರ್ವಜನಿಕರು ಮತ್ತು ಸಂಸ್ಥೆಗಳು ಹೆಚ್ಚಿನ ಸಹಕಾರ ನೀಡಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ