LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ.ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಪರಿಣಾಮ 9 ಮಂದಿ ವ್ಯಾಪಾರಿಗಳು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಅಲ್ಲದೆ, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಜನರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.ಘಟನೆ ವೇಳೆ ಲಾರಿಯಲ್ಲಿ ಒಟ್ಟು 28 ಮಂದಿ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ. ಲಾರಿಯು ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು, ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ