LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ದೇವಸ್ಥಾನಗಳ ಹುಂಡಿಗೆ 360 ಡಿಗ್ರಿ ಸಿಸಿಟಿವಿ ಭದ್ರತೆ: ಎಡಿಸಿ ಝುಬೇರ್ ಸೂಚನೆ

ಬಳ್ಳಾರಿ: ಜಿಲ್ಲೆಯ ಎಲ್ಲ ದೇವಾಲಯಗಳ ಭಕ್ತರ ಕಾಣಿಕೆ ಹುಂಡಿಗಳಿಗೆ ಸೂಕ್ತ ಭದ್ರತೆ ಒದಗಿಸಿ, 360 ಡಿಗ್ರಿ ಸಿಸಿಟಿವಿ ನಿಗಾ ವ್ಯವಸ್ಥೆ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇವಸ್ಥಾನಗಳ ಹುಂಡಿ ಭದ್ರತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 713 ದೇವಾಲಯಗಳಲ್ಲಿ ಈಗಾಗಲೇ 354 ದೇವಾಲಯಗಳ ಮಾನಿಟರಿಂಗ್ ಪೂರ್ಣಗೊಂಡಿದ್ದು, ಉಳಿದ ದೇವಾಲಯಗಳಲ್ಲೂ ಶೀಘ್ರವೇ ನಿಗಾ ವ್ಯವಸ್ಥೆ ಅಳವಡಿಸಬೇಕು ಎಂದರು.
ಹು0ಡಿ ಎಣಿಕೆ ಕಾರ್ಯವು ಸಂಪೂರ್ಣ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಬೇಕು. ಕಳ್ಳತನ ಹಾಗೂ ಇತರೆ ಅಕ್ರಮಗಳನ್ನು ತಡೆಯಲು ಡಿಜಿಟಲ್ ರೂಪದಲ್ಲಿ ಕಾಣಿಕೆ ಸ್ವೀಕರಿಸುವ ವ್ಯವಸ್ಥೆ ಕಲ್ಪಿಸುವ ಮೂಲಕ ಭಕ್ತರಿಗೆ ಯಾವುದೇ ತೊಂದರೆಯಾಗದAತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬಳ್ಳಾರಿಯ ಪ್ರಸಿದ್ಧ ಕನಕದುರ್ಗಮ್ಮ ದೇವಸ್ಥಾನದಲ್ಲಿ ಸಿಸಿಟಿವಿ ಮಾನಿಟರಿಂಗ್ ಕಾಮಗಾರಿ ಏಳು ದಿನಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ದೇವಾಲಯಗಳ ಸೂಕ್ತ ಸ್ಥಳಗಳಲ್ಲಿ ಎಲ್ಲರಿಗೂ ಗೋಚರಿಸುವ ರೀತಿಯಲ್ಲಿ ಹುಂಡಿಗಳನ್ನು ಅಳವಡಿಸಿ ಭದ್ರತೆ ಹೆಚ್ಚಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 5 ಎ ವರ್ಗ, 5 ಬಿ ವರ್ಗ ಹಾಗೂ 703 ಸಿ ವರ್ಗ ಸೇರಿ ಒಟ್ಟು 713 ದೇವಾಲಯಗಳಿದ್ದು, ಎಲ್ಲೆಡೆ ಭದ್ರತಾ ವ್ಯವಸ್ಥೆ ಬಲಪಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯದಲ್ಲಿ ಸರ್ಕಾರಿ ನೌಕರರಿಗೆ ಮಾತ್ರ ಅವಕಾಶ ನೀಡಬೇಕು, ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ರಚಿಸಬೇಕು ಹಾಗೂ ಪ್ರತಿ 15 ದಿನಗಳಿಗೊಮ್ಮೆ ಸಂಬ0ಧಿತ ಅಧಿಕಾರಿಗಳು ದೇವಾಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು.  ಹುಂಡಿ ಎಣಿಕೆ ವೇಳೆ ಕಳ್ಳತನದಂತಹ ಪ್ರಕರಣಗಳು ಕಂಡುಬAದರೆ ಸಂಬAಧಿತ ದೇವಾಲಯ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ