LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ರಾಜ್ಯದಲ್ಲಿ 37,48,700 ವಸತಿ ರಹಿತರು

ಬೆಳಗಾವಿ : ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ. ಜಡ್. ಜಮೀರ್ ಅಹಮದ್ ಖಾನ್ ವಿಧಾನಪರಿಷತ್ ಗಿಂದು ತಿಳಿಸಿದರು. ಸದಸ್ಯ ಶಿವಕುಮಾರ್ ಕೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2018ರಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆ ಹಾಗೂ 2017ರಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ ನಗರ ಪ್ರದೇಶದಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಯಲ್ಲಿ ರಾಜ್ಯದಲ್ಲಿ ಒಟ್ಟು 37,48,766 ವಸತಿ ರಹಿತರು ಕಂಡು ಬಂದಿದ್ದು, ಇದರಲ್ಲಿ 17,31,633 ನಿವೇಶನ ರಹಿತರು ಮತ್ತು 20,17,133 ವಸತಿ ರಹಿತರು ಇದ್ದಾರೆ ಎಂದರು.2024-2025ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಒಟ್ಟು 7,38,881 ಮನೆ ಗಳ ಗುರಿ ನೀಡಿದ್ದು, ಇವು ಗಳಲ್ಲಿ 3,27,747 ಅನುಮೋದನೆಗೊಂಡಿರುತ್ತವೆ. 411134 ಮನೆಗಳು ಅನುಮೋದನೆಗೆ ಬಾಕಿಯಿವೆ ಎಂದರು.
ರಾಜ್ಯದಲ್ಲಿ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದವರಿಗೆ ರೂ. 4 ಲಕ್ಷ ಮತ್ತು ಸಾಮಾನ್ಯ ವರ್ಗದವರಿಗೆ ರೂ. 3.5 ಲಕ್ಷ ಕ್ಕೆ ಹೆಚ್ಚಳ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ