LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಮೆಣಸಿನಕಾಯಿ ಗಿಡಗಳ ನಡುವೆ ಬೆಳೆಸಿದ್ದ ಗಾಂಜಾ ಗಿಡಗಳು: 5 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಬಳ್ಳಾರಿ : ಬಳ್ಳಾರಿ ತಾಲ್ಲೂಕಿನ ಗೋಟೂರು ಗ್ರಾಮದಲ್ಲಿ ಮೆಣಸಿನಕಾಯಿ ಬೆಳೆಯ ನಡುವೆ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಖಚಿತವಾದ ಮಾಹಿತಿ ಪಡೆದ ಅಬಕಾರಿ ಪೊಲೀಸರು ಮಿಂಚಿನ ದಾಳಿ ನಡೆಸಿ, ಅಂದಾಜು 5 ಲಕ್ಷ ರೂಗಳ ಮೌಲ್ಯದ ಗಾಂಜಾಗಿಡಗಳನ್ನು ಪತ್ತೆ ಮಾಡಿದ್ದು, ಕೇಸ್ ದಾಖಲಿಸಿಕೊಂಡಿದ್ದಾರೆ.
ಗೋಟೂರು ಗ್ರಾಮದಲ್ಲಿನ ಜಮೀನೊಂದರಲ್ಲಿ ಮೆಣಸಿನಕಾಯಿ ಬೆಳೆಯ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿರುವುದು ಕಂಡುಬಂದಿದೆ. ಅಬಕಾರಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಮೆಣಸಿನಕಾಯಿ ಬೆಳೆಯ (ಫಸಲಿನ) ನಡುವೆ ಬೆಳೆಸಲಾಗಿದ್ದ ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿದ್ದಾರಲ್ಲದೇ, ಅನೇಕ ಗಾಂಜಾಗಿಡಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಬಕಾರಿ ಡಿಸಿ ಮಂಜುನಾಥ್, ಡಿಎಸ್‍ಪಿ ಶರಣಪ್ಪ ಕರಡಿ, ಪಿಎಸ್‍ಐ ಹೊನ್ನೂರ್‍ವಲಿ ಮತ್ತು ಸಿಬ್ಬಂದಿ ವರ್ಗದವರು ದಾಳಿ ನಡೆಸಿ, ಅಕ್ರಮವಾಗಿ ಬೆಳೆಯಲಾಗಿದ್ದ ಅಂದಾಜು 40ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಪೊಲೀಸರು ವಶಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಐದು ಲಕ್ಷ ರೂಪಾಯಿಗಳು ಇರಬಹುದು ಎಂದು ಅಂದಾಜಿಸಲಾಗಿದೆ. ಸುಮಾರು ಐದರಿಂದ ಆರು ಅಡಿಗಳ ಎತ್ತರಕ್ಕೆ ಗಾಂಜಾಗಿಡಗಳನ್ನು ಬೆಳೆಸಲಾಗಿತ್ತು ಎಂದು ಹೇಳಲಾಗಿದೆ.
ಅಬಕಾರಿ ಪೊಲೀಸರು ದಾಳಿ ನಡೆಸಿದ ಬಗ್ಗೆ ಮಾಹಿತಿ ಪಡೆದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾದಕ ವಸ್ತುಗಳ ನಿಷೇಧ ಕಾಯಿದೆ ಅಡಿಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ