LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ಬಿಗ್ ಬಾಸ್‌ಗೆ ಗುಡ್ ಬೈ ಹೇಳಿದ ನಟ ಕಿಚ್ಚ ಸುದೀಪ್

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ನಟ ಸುದೀಪ್‌ ಅವರೇ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು, ಕಳೆದ 11 ಸೀಸನ್‌ಗಳಿಂದ ನಾನು ಬಿಗ್ ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಎಲ್ಲರಿಗೂ ಧನ್ಯವಾದಗಳು. ಮುಂಬರುವ ಫೈನಲ್ ಆತಿಥೇಯನಾಗಿ ನನ್ನ ಕೊನೆಯದು, ಮತ್ತು ನಿಮ್ಮೆಲ್ಲರನ್ನೂ ನನ್ನ ಅತ್ಯುತ್ತಮ ಮನರಂಜನೆಗಾಗಿ ಆಶಿಸುತ್ತೇನೆ. ಇದು ಮರೆಯಲಾಗದ ಪ್ರಯಾಣ, ಅದನ್ನು ನನ್ನ ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಈ ಅವಕಾಶ ನೀಡಿದ ಕಲರ್ಸ್‌ ಕನ್ನಡಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಅತಿದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್‌ ಬಾಸ್‌ ಕಾರ್ಯಕ್ರಮವನ್ನ ನಟ ಕಿಚ್ಚ ಸುದೀಪ್‌ ಅವರು ನಡೆಸಿಕೊಡುತ್ತಿದ್ದು, ಆರಂಭದಿಂದ ಬಿಗ್ ಬಾಸ್ ಕನ್ನಡದ ಹೋಸ್ಟ್ ಆಗಿ 11 ಸೀಸನ್​ಗಳನ್ನು ನಡೆಸಿಕೊಟ್ಟಿದ್ದಾರೆ. ಇದು ನನ್ನ ಕೊನೆಯ ಸೀಸನ್ ಎಂದು ನಟ ಕಿಚ್ಚ ಸುದೀಪ್‌ ಅವರು ಈ ಮೊದಲು ಹೇಳಿದ್ದರು. ಈಗ ಅವರು ಅಧಿಕೃತವಾಗಿ ಬಿಗ್ ಬಾಸ್ ತೊರೆಯುವ ಬಗ್ಗೆ ಘೋಷಣೆ ಮಾಡಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 11 ಕಾರ್ಯಕ್ರಮ ನಡೆಯುವ ಮೊದಲು ಸೀಸನ್ 11 ನಡೆಸಿಕೊಡುವುದಿಲ್ಲ ಎಂದು ಕಿಚ್ಚ ಸುದೀಪ್‌ ಅವರು ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಬಿಗ್‌ ಬಾಸ್‌ ಸೀಸನ್‌ ಶೋ ನಡೆಸಲು ಒಪ್ಪಿಗೆ ನೀಡಿದ್ದರು. ಈ ಹಿಂದೆ ಮ್ಯಾಕ್ಸ್‌ ಸಿನಿಮಾದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್‌, ಎಷ್ಟು ಮಾಡುವುದು? ಎಲ್ಲರನ್ನೂ ರಿಪೇರಿ ಮಾಡುತ್ತಾ ಕುಳಿತುಕೊಳ್ಳಲು ನಾನು ಬಂದಿದ್ದೀನಾ? ಬೇರೆ ಕೆಲಸಗಳು ಇರುತ್ತವೆ. ತುಂಬ ಶ್ರಮ ಬೇಕು. ಅದು ಯಾರಿಗೂ ಅರ್ಥ ಆಗುತ್ತಿಲ್ಲ ಎಂದು ತಿಳಿಸಿದ್ದರು.

 

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ