LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

 ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಂಗಳೂರು:   ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.

ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಸಮಾಲೋಚಿಸಿದರು.

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು  ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ