LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ನಟಿ ರಮ್ಯಾಗೆ ಅವಹೇಳನ : ಮೂವರು ಅರೆಸ್ಟ್‌

ನಟಿ ರಮ್ಯಾಗೆ ಅವಹೇಳನ :ಮೂವರು ಅರೆಸ್ಟ್‌

ಬೆಂಗಳೂರು: ನಟಿ ರಮ್ಯಾಗೆ (Actress Ramya) ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲಾರ (Kolar) , ಚಿತ್ರದುರ್ಗ (Chitradurga) ಮೂಲದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‍ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಐದು ಅಕೌಂಟ್‍ಗಳನ್ನು ಸೇರಿಸಿ 48 ಅಕೌಂಟ್‍ಗಳ ಮೇಲೆ ದೂರು ದಾಖಲಿಸಿದ್ದರು. ಎಫ್‍ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್‍ಗಳು ಡಿಲಿಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್‍ಗಳು ಅಕೌಂಟ್ ಡಿಟೇಲ್ಸ್ ಕೊಡುವಂತೆ ಮನವಿ ಮಾಡಿದ್ದರು.ಬೆಂಗಳೂರು: ದರ್ಶನ್ ಫ್ಯಾನ್ಸ್ ವಿರುದ್ಧ ಪೊಲೀಸ್ ಆಯುಕ್ತರಿಗೆ ನಟಿ ರಮ್ಯಾ ದೂರು;  ಅತ್ಯಾಚಾರ, ಜೀವ ಬೆದರಿಕೆ ಟ್ರೋಲ್ ವಿರುದ್ಧ ಕಿಡಿ

ಪೊಲೀಸರ ಮನವಿಯಂತೆ ಸಂಬಂಧಪಟ್ಟ ಸಂಸ್ಥೆಗಳು ಡಿಲಿಟ್ ಆಗಿದ್ದ ಅಕೌಂಟ್‍ಗಳ ಎಲ್ಲಾ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ. ಈ ಅಶ್ಲೀಲ ಕಮೆಂಟ್‌ ಹಾಕಿ, ಅಕೌಂಟ್ ಡಿಲಿಟ್ ಮಾಡಿ ಆರಾಮಾಗಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 40 ಮಂದಿಯ ಚಹರೆ ಗುರುತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ್ದ ಅನಿಸಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಪೋಸ್ಟ್ ಮಾಡಿದ್ದರು. ಇದಕ್ಕೆ ಕೆಲವು ಕಿಡಿಗೇಡಿಗಳು ಅಶ್ಲೀಲ ಸಂದೇಶ ಹಾಗೂ ಕಮೆಂಟ್‌ ಹಾಕಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ